Belagavi NewsBelgaum NewsKarnataka News

*ಬಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಂದ ಸ್ಟೈಫಂಡ್ ಹೆಚ್ಚಳಕ್ಕಾಗಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಬಿಮ್ಸ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಕಲಿಕಾ ವೈದ್ಯಕೀಯ ವಿದ್ಯಾರ್ಥಿಗಳು ಇಂದು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ತುರ್ತುಸೇವೆಯನ್ನು ಹೊರತುಪಡಿಸಿ, ಬಾಕಿ ಸೇವೆಗಳಿಂದ ದೂರ ಉಳಿದು ಶಾಂತಿಯುತ ಪ್ರತಿಭಟನೆ ನಡೆಸಿದರು.

ಅನ್ಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕಲಿಕಾ ವೈದ್ಯ ವಿದ್ಯಾರ್ಥಿಗಳಿಂದ ಶುಲ್ಕವನ್ನು ಹೆಚ್ಚಿಗೆ ಪಡೆಯಲಾಗುತ್ತಿದೆ ಆದರೆ, ಅತಿ ಕಡಿಮೆ ಸ್ಟೈಫಂಡ್ ನೀಡಲಾಗುತ್ತಿದೆ. ರಾಜ್ಯದಲ್ಲಿ ಜ್ಯೂನಿಯ‌ರ್ ವೈದ್ಯರಿಗೆ ಯಾವುದೇ ಸೇವಾ ಭದ್ರತೆ ಇಲ್ಲ. ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಶೀಘ್ರದಲ್ಲೇ ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾನಿರತರು ಎಚ್ಚರಿಕೆ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button