Belagavi NewsBelgaum NewsKarnataka News

*ಹಕ್ಕಿ ಪಿಕ್ಕಿ ಸಮುದಾಯದಿಂದ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪರಿಶಿಷ್ಟ ಜಾತಿಯ ಒಳಮೀಸಲಾತಿಯನ್ನು ಕೂಡಲೇ ರಾಜ್ಯ ಸರಕಾರ ಜಾರಿಗೊಳಿಸುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ  ಸಂಯೋಜಕ ರಾಜ್ಯ ಸಮಿತಿವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕಳೆದ ವರ್ಷದ ಬಜೆಟ್‌ನಲ್ಲಿ ದಲಿತ ಸಮುದಾಯದವರಿಗೆ ಮೀಸಲಿಟ್ಟ ಕೋಟ್ಯಾಂತರ ರೂಪಾಯಿಗಳನ್ನು ಬಿಟ್ಟಿ ಭಾಗ್ಯಕ್ಕೆ ಉಪಯೋಗಿಸಿದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪರವರು ಕೂಡಲೇ ರಾಜೀನಾಮೆ ನೀಡಬೇಕು. ಜಾತಿ ಜನಗಣತಿ ಕೂಡಲೇ ಬಹಿರಂಗಪಡಿಸಬೇಕು ಹಾಗೂ ವಸತಿ ಭೂಮಿ, ಸ್ಮಶಾನ, ದಲಿತ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಎಲ್ಲಾ ವಿಶ್ವ ವಿದ್ಯಾಲಯಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆಸಲ್ಲಿಸುತ್ತಿರುವ ಡಿ‌ ದರ್ಜೆಯ ಕಾರ್ಮಿಕ ವರ್ಗವನ್ನು ಕಾಯಂಗೊಳಿಸಬೇಕು. ರಾಜ್ಯದ ಗಡಿಭಾಗಗಳ ಸರಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಸಮವಸ್ತ್ರಗಳೊಂದಿಗೆ ಪಠ್ಯ ಪುಸ್ತಕಗಳನ್ನು ಒದಗಿಸಬೇಕು. ಪ್ರತಿ ಶಾಲೆಗೂ ಒಂದು ಗ್ರಂಥಾಲಯ ಹಾಗೂ ಹೆಣ್ಣು ಮತ್ತು ಗಂಡುಮಕ್ಕಳಿಗೆ ಪ್ರತ್ಯೇಕ ಶೌಚಾಲಯವನ್ನು ನಿರ್ಮಿಸಿಕೊಡಬೇಕು ಎಂದರು.

ಬೆಂಗಳೂರು ಐಟಿ ಸಿಟಿ ಸೇರಿದಂತೆ ರಾಜ್ಯದ ವಿವಿಧೆಡೆ ಬಡವರು ವಾಸವಾಗಿರುವ ದೇಶದಲ್ಲಿ ಮಾದಕ ವಸ್ತುಗಳ ಮಾರಾಟ ಹೆಚ್ಚಾಗಿದ್ದು, ಇದರಿಂದ ಯುವಕರು ದಾರಿತಪ್ಪಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಕೊಳ್ಳು ವಂತಾಗಿದೆ. ಕೂಡಲೇ ಸರಕಾರ ಈ ಬಗ್ಗೆ ಗಮನಹರಿಸಿ ಮಾದಕ ವಸ್ತುಗಳ ಮಾರಾಟಗಾರರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button