Belagavi NewsBelgaum NewsKannada NewsKarnataka NewsLatest

ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಶವ ಇಟ್ಟು ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಹಾಗೂ ಸಂಬಂಧಿಕರು ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ರಾಮದುರ್ಗ ತಾಲೂಕಿನ ನಾಗನೂರು ತಾಂಡಾದ ಕಲ್ಪನಾ ರಾಥೋಡ ಎನ್ನುವ ಮಹಿಳೆ ಸೋಮವಾರ ರಾತ್ರಿ ಜಿಲ್ಲಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ತಾಯಿ- ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಮಂಗಳವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಆರೋಗ್ಯ ಹದಗೆಟ್ಟು ಮಹಿಳೆ ಸಾವಿಗೀಡಾದಳು. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ. ಬೇರೆ ಆಸ್ಪತ್ರೆಗೆ ಕರೆದೊಯ್ಯಲೂ ಅವಕಾಶ ನೀಡಲಿಲ್ಲ ಎನ್ನುವುದು ಕುಟುಂಬಸ್ಥರ ಆರೋಪ.

ಕಲ್ಪನಾ ಸಾವಿಗೆ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಬರಬೇಕು, ಜಿಲ್ಲಾಧಿಕಾರಿಗಳು ಬರಬೇಕು ಎಂದು ಪಟ್ಟು ಹಿಡಿದಿದ್ದಾರೆ. ಶವವನ್ನು ಶವಾಗಾರದಲ್ಲಿಡಲು ಬಂದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Home add -Advt

Related Articles

Back to top button