Karnataka News
ಬಾರ್ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ಪ್ರಗತಿ ವಾಹಿನಿ ಸುದ್ದಿ, ಚಿಕ್ಕಮಗಳೂರು: ಮದ್ಯ ಸೇವಿಸಿದ ಯುವಕನೊಬ್ಬ ರಾತ್ರಿ ಬೆಳಗಾಗುವುದರೊಳಗೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಕಾಲನಿಯಲ್ಲಿ ನಡೆದಿದೆ.
ಯುವಕನ ಸಾವಿಗೆ ಮದ್ಯ ಕಾರಣ ಎಂದು ಆರೋಪಿಸಿದ ಕುಟುಂಬಸ್ಥರು ಬಾರ್ ಮುಂದೆ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಮಂಜುನಾಥ(29) ಮೃತಪಟ್ಟ ವ್ಯಕ್ತಿ.ಇಲ್ಲಿನ ಬಾರ್ ನಲ್ಲಿ ಮದ್ಯ ಸೇವಿಸಿದ್ದೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿ ಪ್ರತಿಭಟನೆ ನಡೆಸಿದರು.
ಈ ಹಿಂದೆಯೂ ಇದೇ ರೀತಿ ಮೂರ್ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಆದ್ದರಿಂದ ಕೂಡಲೇ ಬಾರ್ ಮುಚ್ಚುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
https://pragati.taskdun.com/cm-bommayi-led-foundation-stone-for-400-bedded-mother-child-hospital-in-ballari/




