Kannada NewsKarnataka NewsLatest

*ಸಚಿವರ ಮುಂದೆ ಸಭೆಯಲ್ಲಿ ವಿಷದ ಬಾಟಲಿ ಹಿಡಿದು ನಿಂತ ರೈತ*

ಪ್ರಗತಿವಾಹಿನಿ ಸುದ್ದಿ: ಜಮೀನು ವಾಜ್ಯ ವಿಚಾರಕ್ಕೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ಸಮಸ್ಯೆ ನಿವಾರಣೆ ಮಾಡದಿದ್ದರೆ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತ ಸಭೆಯಲ್ಲಿ ಸಚಿವರ ಮುಂದೆ ವಿಷದ ಬಾಟಲಿ ಹಿಡಿದು ತನ್ನ ಅಳಲು ತೊಡಿಕೊಂಡಿದ್ದಾನೆ.  

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪ ನೇತೃತ್ವದಲ್ಲಿ ನಡೆದ ಡಾ. ಬಿಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಸಚಿವರ ಎದುರೇ ವಿಷ ಕುಡಿಯುವುದಾಗಿ ರೈತರೊಬ್ಬರು ಹೇಳಿದ್ದಾರೆ.

ದೇವನಹಳ್ಳಿಯ ಮುದಗುರ್ಕಿ ಗ್ರಾಮದ ನಿವಾಸಿ ಆಂಜಿನಪ್ಪ ಸಭೆಗೆ ವಿಷದ ಬಾಟಲ್ ತಂದಿದ್ದರು. 20 ಗುಂಟೆ ಜಮೀನು ವ್ಯಾಜ್ಯ ವಿಚಾರಕ್ಕೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವ ಆರೋಪ ಮಾಡಿದ್ದಾರೆ. 

ಅಂಬೇಡ್ಕರ್ ಜಯಂತಿ ಒಳಗಾಗಿ ವ್ಯಾಜ್ಯ ಬಗೆ ಹರಿಸದಿದ್ದರೆ ಕುಟುಂಬ ಸಮೇತ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಪೊಲೀಸರು ವಿಷದ ಬಾಟಲ್ ಕಿತ್ತುಕೊಂಡು ಬುದ್ಧಿವಾದ ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button