Kannada NewsKarnataka NewsLatest

ಬೆಳಗಾವಿಯಲ್ಲಿ ಮೃಣಾಲ್ ಹೆಬ್ಬಾಳಕರ್ ನೇತೃತ್ವದಲ್ಲಿ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –   ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮನೆಯ ಮೇಲೆ ಸಿಬಿಐ ದಾಳಿ ನಡೆಸಿದ್ದನ್ನು ವಿರೋಧಿಸಿ ಬೆಳಗಾವಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೃಣಾಲ್ ಹೆಬ್ಬಾಳಕರ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಚನ್ನಮ್ಮ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Home add -Advt

ಈ ವೇಳೆ ಮಾತನಾಡಿ ಮೃಣಾಲ ಹೆಬ್ಬಾಳಕರ್, ಡಿ.ಕೆ.ಶಿವಕುಮಾರ ಟ್ರಬಲ್ ಶೂಟರ್ ಎಂದೇ ಹೆಸರು ಪಡಡೆದವರು. ಇತದಕ್ಕೆಲ್ಲ ಅವರು ಬಗ್ಗುವವರಲ್ಲ. ಆದರೆ ಪದೇ ಪದೆ ಅವರ ಮೇಲೆ ದಾಳಿ ಮಾಡಿಸುತ್ತಿರುವ ಬಿಜೆಪಿ ಧೋರಣೆ ಖಂಡನೀಯ ಎಂದರು.

ಬಿಜೆಪಿ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.

Related Articles

Back to top button