
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದಲ್ಲಿರುವ ಹೂ, ಹಣ್ಣು, ಹುಣಸೆಹಣ್ಣು ಮತ್ತು ಬಾಳೆಹಣ್ಣು ಮಾರಾಟ ಮಾಡುತ್ತಿರುವ ಖಾಸಗಿ ಮಾರುಕಟ್ಟೆಗಳನ್ನು ಸರ್ಕಾರದ ಕೃಷಿ ಉತ್ಪನ್ನಗಳ ಮಾರುಕಟ್ಟೆಗೆ ಸ್ಥಳಾಂತರಿಸಬೇಕು ಎಂದು ಆಹ್ರಹಿಸಿ ಭಾರತೀಯ ಕೃಷಿಕ ಸಮಾಜದ ಅದ್ಯಕ್ಷ ಸಿದ್ದಗೌಡ ಮೊದಗಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಇಂದು ನಗರದ ಕನ್ನಡ ಸಾಹಿತ್ಯ ಭವನದದಿಂದ ಪ್ರತಿಭಟನೆ ಆರಂಭಿಸಿದ ರೈತರು ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ಹೋರ ಹಾಕಿದರು. ಈ ವೇಳೆ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿ ಮನವಿ ಸ್ವೀಕರಿಸಿದರು.
ಬಳಿಕ ಮಾತನಾಡಿದ ಭಾರತೀಯ ಕೃಷಿಕ ಸಮಾಜ ಸಂಘಟನೆಯ ರಾಜ್ಯಾಧ್ಯಕ್ಷ ಸಿದ್ದಗೌಡ ಮೊದಗಿ ಅವರು, ಬೆಳಗಾವಿ ನಗರದ ಕಳೆದ ಹಲವಾರು ವರ್ಷಗಳಿಂದ ಖಾಸಗಿ ಮಾರುಕಟ್ಟೆಗಳಲ್ಲಿ ಕಾನೂನುಬಾಹೀರವಾಗಿ ಹೂ, ಹಣ್ಣು, ಹುಣಸೆಹಣ್ಣು ಮತ್ತು ಬಾಳೆಹಣ್ಣು ಮಾರಾಟ ಮಾಡುತ್ತಿದ್ದರು. ಸಂಬಂಧಿಸಿದ ಅಧಿಕಾರಗಳು ಜಾಣ ಮೌನ ವಹಿಸಿದ್ದು, ಇದರಿಂದ ರೈತರಿಗೆ ಆರ್ಥಿಕ ತೊಂದರೆಯಾಗಿದೆ. ಹಾಗಾಗಿ ಖಾಸಗಿ ಮಾರುಕಟ್ಟೆಗಳನ್ನು ಎಪಿಎಂಸಿಗೆ ಸ್ಥಳಾರಿಸುವಂತೆ ಒತ್ತಾಯಿಸಲಾಯಿತು ಎಂದು ತಿಳಿಸಿದರು.