
ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ಮಗ್ಗಗಳ ನೇಕಾರರು ಏಪ್ರಿಲ್ 1 ರಿಂದ ಬಾಕಿ ಇರುವ ವಿದ್ಯುತ್ ಬಿಲ್ ತುಂಬಿಲ್ಲ. ಆ ಬಾಕಿ ಬಿಲ್ ತುಂಬುವಂತೆ ಕೆಇಬಿಯಿಂದ ನೋಟಿಸ್ ಬರುತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ನೇಕಾರರ ಬಾಕಿ ಬಿಲ್ ಸರ್ಕಾರವೇ ತುಂಬಿಕೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು.
ಇಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಿಂದ ಕರ್ನಾಟಕ ರಾಜ್ಯ ನೇಕಾರರ ಸಂಘದಿಂದ ಪ್ರತಿಭಟನಾ ಮೇರವಣಿಗೆ ಆರಂಭಿಸಲಾಯಿತು. ಬಳಿಕ ಡಿಸಿ ಕಚೇರಿ ವರೆಗೆ ಪ್ರತಿಭಟನೆ ಮಾಡಿ, ಡಿಸಿ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ನೇಕಾರರ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ್ ಟಿರಕಿ ಅವರು, ನೇಕಾರರ ಸಮಸ್ಯೆಗಳನ್ನು ಇಟ್ಟುಕೊಂಡು ಸರ್ಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ವರ್ಷವಿಡೀ ಹೋರಾಟ ಮಾಡಿದರು ನೇಕಾರರ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಬೇರೆ ಬೇರೆ ಜಿಲ್ಲೆಗಳಲ್ಲಿ ಹೋರಾಟ ಮಾಡಿದರು ನೇಕಾರರನ್ನು ಸರ್ಕಾರ ಕಡೆಗಣಿಸಿದೆ. ನೇಕಾರ ಮತ್ತು ನೇಕಾರಿಕೆಯನ್ನು ಉಳಿಸಲು ನಮ್ಮ ಹಕ್ಕೋತ್ತಾಯಗಳನ್ನು ಈಡೇರಿಕೆ ಮಾಡಲು ಕನಿಷ್ಠ 1500 ಕೋಟಿ ರೂಪಾಯಿಗಳ ಅನುದಾನವನ್ನು ಈಗ ನಡೆಯುತ್ತಿರುವ ಅಧಿವೇಶನದಲ್ಲಿ ಘೋಷಿಸಲಿ. ನೇಕಾರರ ಕುಂದು ಕೊರತೆಗಳ ಬಗ್ಗೆ ಸಮಗ್ರ ಚರ್ಚೆ ಮಾಡಿ, ಮುಂಬರುವ ಪೂರಕ ಬಜೆಟ್‌ನಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಗೆ ಹಣಕಾಸು ಒದಗಿಸಬೇಕು. ಈ ಮೂಲಕ ಸೌಲಭ್ಯಗಳನ್ನು ಕಟ್ಟಕಡೆಯ ನೇಕಾರನಿಗೂ ಒದಗಿಸಬೇಕೆಂದು ಆಗ್ರಹಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ