ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜೈ ಮಹಾರಾಷ್ಟ್ರ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬೆಳಗಾವಿ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇಂದು ನಗರದ ಕನ್ನಡ ಸಾಹಿತ್ಯ ಭವನದಿಂದ ಬೃಹತ್ ಪ್ರತಿಭಟನೆ ಆರಂಭಿಸಿದ ಕನ್ನಡಪರ ಹೋರಾಟಗಾರರು ಚೆನ್ನಮ್ಮ ವೃತ್ತದಲ್ಲಿ ಶಾಸಕ ಅಭಯ ಪಾಟೀಲ್ ಹಾಗೂ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ ಮಹಾರಾಷ್ಟ್ರ ಸಚಿವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಭಾವ ಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಹೊರಾಟಗಾರರು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ