ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು : ವೇಳೆಗೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಇಲ್ಲದ ಪರಿಣಾಮ ನಾವು ಪ್ರತಿದಿನ ವಿದ್ಯಾಭ್ಯಾಸಕ್ಕೆ ಶಾಲಾ-ಕಾಲೇಜಿಗೆ ಹೋಗಲು ತುಂಬಾ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಬೆಳಿಗ್ಗೆ ಸಮೀಪದ ತಿಗಡೊಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೇರಿಕೊಂಡು ಬಸ್ ತಡೆದು ಪ್ರತಿಭಟನೆ ನಡೆಸಿ, ಕಳೆದ ೧೫ ದಿನದಿಂದ ಯಾವುದೇ ಬಸ್ ಸರಿಯಾಗಿ ಬರುತ್ತಿಲ್ಲ. ಈ ಬಗ್ಗೆ ಗ್ರಾಮ ಪಂಚಾಯತಿಯಿಂದ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಹಲವಾರು ಭಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾ.ಪಂ ಸದಸ್ಯ ಸಾವಂತ ಕಿರಬನ್ನವರ ಅಳಲು ತೊಡಿಕೊಂಡರು.
ಪ್ರತಿಭಟನಾ ಸ್ಥಳಕ್ಕೆ ಕಿತ್ತೂರು ಪೊಲೀಸರು ಹಾಗೂ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಬಿ.ಮೇಲಿನಮನಿ ಆಗಮಿಸಿ ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿ, ಮೇಲಾಧಿಕಾರಿಗಳಿಗೆ ತಿಳಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ದೇವೇಂದ್ರ ಪಾಟೀಲ, ಬಸವರಾಜ ಶಿರಗಾಪೂರ, ಚನಬಸಪ್ಪ ಮಲಶೇಟ್ಟಿ, ಅಶೋಕ ಮಡಿವಾಳರ, ಸಿದ್ದಯ್ಯ ಹೊಸಮಠ, ಬಸಪ್ಪ ದೇಗಾಂವಿ, ಸೋಮಶ ಗಾಣಿಗೇರ, ಈರಣ್ಣ ಗೋದಳ್ಳಿ, ಅದೃಶ್ಯ ಹುಡೇದ, ಕಿರಣ ಗೋದಳ್ಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಅಧಿಕಾರಿಗಳಿಗೆ ಈಗಾಗಲೇ ಯಾವುದೇ ರೀತಿ ಬಸ್ಸಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಹೇಳಲಾಗಿದೆ. ಮತ್ತೊಮ್ಮೆ ಮೇಲಾಧಿಕಾರಿಗಳ ಜೊತೆ ಮಾತನಾಡಿ ಇನ್ನೆರಡು ದಿನದಲ್ಲಿ ಸಮಸ್ಯೆ ಬಗೆಹರಿಸಲಾಗುವುದು.-ಮಾಹಾಂತೇಶ ದೊಡಗೌಡರ, ಶಾಸಕರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ