Belagavi NewsBelgaum NewsKarnataka News

*ನರೇಗಾ ಯೋಜನೆಯಡಿ ರೈತರಿಗೆ ಹೆಚ್ಚಿನ ಸಹಾಯ ನೀಡಿ :ಜಿಪಂ ಸಿಇಒ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಮುಖ್ಯವಾಗಿ ರಾಷ್ಟ್ರೀಯ ತೋಟಗಾರಿಕೆ ಮಿಷನ್, ನರೇಗಾ ಯೋಜನೆಯಡಿ ಹೆಚ್ಚಿನ ರೈತರಿಗೆ  ಸಹಾಯ ನೀಡಿ ರೈತರ ಆದಾಯವ ಹೆಚ್ಚಿಸುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಅವರು ನಿರ್ದೇಶನ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ (ಜೂನ್-10) ರಂದು ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಮತ್ತು ಕರ್ನಾಟಕ ರಾಜ್ಯ ತೋಟಗಾರಿಕೆ ಅಭಿವೃದ್ಧಿ ಏಜನ್ಸಿ ಯೋಜನೆಗಳ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ಯಾವುದೇ ಅಡೆತಡೆಯಿಲ್ಲದೇ ತೋಟಗಾರಿಕೆ ಚಟುವಟಿಕೆ ಕೈಗೊಳ್ಳಲು ಇಲಾಖೆಯ ವಿವಿಧ ಯೋಜನೆಗಳಡಿ ಸಹಾಯಧನ ನೀಡುವುದು. 2025-26 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೆಚ್ಚಿನ ಪ್ರಚಾರ ಕೈಗೊಂಡು ರೈತರಿಗೆ ಸದುಪಯೋಗವಾಗುವಂತೆ ಕಾರ್ಯನಿರ್ವಹಿಸಲು ಸಭೆಯಲ್ಲಿದ್ದ ಎಲ್ಲ ತೋಟಗಾರಿಕೆ ಅಧಿಕಾರಿಗಳಿಗೆ ಸೂಚಿಸಿದರು. 

ಕರ್ನಾಟಕ ರಾಜ್ಯ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಎಲ್ಲ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಗುಣಮಟ್ಟದ ತೋಟಗಾರಿಕೆ ಕಸಿ ಗಿಡಗಳನ್ನು ತಯಾರಿಸುವುದು ಮತ್ತು ರೈತರಿಗೆ ತೋಟಗಾರಿಕೆ ಬೆಳೆಗಳ ಕುರಿತಾಗಿ ತಾಂತ್ರಿಕ ಮಾಹಿತಿ ನೀಡಲು ತಿಳಿಸಿದರು. 

ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ಮಾಹಾಂತೇಶ ಮುರಗೋಡ, ಪಶುಪಾಲನ ಇಲಾಖೆಯ ಉಪ ನಿರ್ದೇಶಕರಾದ ರಾಜೀವ್, ರೇಷ್ಮೆ ಇಲಾಖೆ ಉಪ ನಿರ್ದೇಶಕರಾದ ಮಹೇಶ, ಜಿಲ್ಲೆಯ ಎಲ್ಲ ತಾಲೂಕು ಮಟ್ಟದ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button