Kannada NewsKarnataka NewsLatest
ಸಕಾಲಕ್ಕೆ ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಪೂರೈಕೆ ಮಾಡಿ – ಲಕ್ಷ್ಮಿ ಹೆಬ್ಬಾಳಕರ್ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಉಚಗಾಂವ ಗ್ರಾಮದ ರೈತ ಸಂಪರ್ಕ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ರೈತರಿಗೆ ಭತ್ತದ ಬಿತ್ತನೆಯ ಬೀಜಗಳನ್ನು ವಿತರಿಸಿದರು.

ಇದೇ ವೇಳೆ ರೈತ ಸಂಪರ್ಕ ಕೇಂದ್ರಗಳ ಸಿಬ್ಬಂದಿ ಜೊತೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರೈತರಿಗೆ ಸಕಾಲಕ್ಕೆ ಎಲ್ಲ ಕೃಷಿ ಪರಿಕರಗಳ ಪೂರೈಕೆಯಾಗಬೇಕು ಎಂದು ತಿಳಿಸಿದರು.