ಪ್ರಗತಿವಾಹಿನಿ ಸುದ್ದಿ; ಧಾರವಾಡ: ಪಿಎಸ್ ಐ ಅಭ್ಯರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಗೊಂದಲವುಂಟಾದ ಪರಿಣಾಮ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಗನ್ ಮ್ಯಾನ್ ಅಭ್ಯರ್ಥಿಗಳಿಗೆ ಥಳಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ವಿಶ್ವವಿದ್ಯಾಲಯದ ಬಳಿ ಪಿಎಸ್ ಐ ಅಭ್ಯರ್ಥಿಗಳು ತಮಗಾದ ಅನ್ಯಾಯವನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಅಭ್ಯರ್ಥಿಗಳ ಸಮಸ್ಯೆಯನ್ನು ಆಲಿಸಲು ಮುಂದಾಗಿದ್ದಾರೆ.
ಈ ವೇಳೆ ಪಿಎಸ್ ಐ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಹಾಗೂ ಆಯ್ಕೆಯಾಗದ ಅಭ್ಯರ್ಥಿಗಳು ಎರಡು ಗುಂಪುಗಳು ಮನವಿ ಪತ್ರ ಹಿಡಿದು ಕುಮಾರಸ್ವಾಮಿಯತ್ತ ಧಾವಿಸಿದ್ದಾರೆ. ಪಿಎಸ್ ಐ ನೇಮಕಾತಿ ಮರು ಪರೀಕ್ಷೆ ನಡೆಸದಂತೆ ಆಯ್ಕೆಯಾದ ಅಭ್ಯರ್ಥಿಗಳು ಮನವಿ ಮಾಡಿದರೆ, ಮರು ಪರೀಕ್ಷೆ ನಡೆಸುವಂತೆ ಆಯ್ಕೆಯಾಗದ ಅಭ್ಯರ್ಥಿಗಳು ಮನವಿ ಮಾಡಿದ್ದಾರೆ. ಎರಡು ಗುಂಪಿನ ಅಭ್ಯರ್ಥಿಗಳ ನಡುವೆ ಗೊಂದಲವುಂಟಾಗಿ, ನೂಕು ನುಗ್ಗಲು ಆರಂಭವಾಗಿದೆ. ಪರಿಸ್ಥಿತಿ ಹತೋಟಿಗೆ ತರಲು ಕುಮಾರಸ್ವಾಮಿ ಗನ್ ಮ್ಯಾನ್ ಯತ್ನಿಸಿದ್ದಾರೆ ಆದರೂ ಸಾಧ್ಯವಾಗಿಲ್ಲ.
ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಹೆಚ್.ಡಿ.ಕೆ ಗನ್ ಮ್ಯಾನ್ ಅಭ್ಯರ್ಥಿಗನ್ನು ಹಿಡಿದು ಥಳಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪಠ್ಯ ಪುಸ್ತಕ ಸಮಿತಿ ವಿಸರ್ಜಿಸಲಾಗಿದೆ ಹೊರತು ಬರ್ಖಾಸ್ತು ಮಾಡಿಲ್ಲ; ಸಚಿವ ಅಶ್ವತ್ಥನಾರಾಯಣ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ