Latest

ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಆರೋಪಕ್ಕೆ ಪುಷ್ಠಿ ನೀಡಿದ ತಾತ್ಕಾಲಿಕ ಆಯ್ಕೆ ಪಟ್ಟಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬರುತ್ತಿದೆ. ಕರ್ನಾಟಕ ಪೊಲೀಸ್ ಇಲಾಖೆಯ 545 ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಲಬುರ್ಗಿ ಜಿಲ್ಲೆ ಅಫ್ಜಲ್ ಪುರ ತಾಲೂಕಿನಿಂದಲೇ 56 ಅಭ್ಯರ್ಥಿಗಳು ಆಯ್ಕೆಯಾಗಿರುವುದು ಈ ಆರೋಪಕ್ಕೆ ಪುಷ್ಠಿ ನೀಡುವಂತಿದೆ.

ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ತನಿಖೆ ನಡೆಸುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತು ತರಬೇತಿ ಮತ್ತು ನೇಮಕಾತಿ ವಿಭಾಗದ ಎಡಿಜಿಪಿಗೆ ಕೆಲ ಅಭ್ಯರ್ಥಿಗಳು ಮನವಿ ಮಾಡಿದ್ದಾರೆ.

ಜನವರಿ 19ರಂದು ಪೊಲೀಸ್ ಇಲಾಖೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಅಫ್ಜಲ್ ಪುರ ತಾಲೂಕಿನಿಂದಲೇ 56 ಅಭ್ಯರ್ಥಿಗಳು ಆಯ್ಕೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಯಾದಗಿರಿ ಆರೋಗ್ಯ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯನಾಗಿರುವ ವ್ಯಕ್ತಿಯೊಬ್ಬ ಅಕ್ರಮದ ಕಿಂಗ್ ಪಿನ್ ಆಗಿದ್ದು, ಆತನೇ ಲಿಖಿತ ಪರೀಕ್ಷೆ ಬರೆಸುತ್ತಾನೆ. ಈ ಹಿಂದೆ ಪೊಲೀಸ್ ಪೇದೆ, ಪ್ರಥಮ ದರ್ಜೆ ಸಹಾಯಕ ನೇಮಕಾತಿಯಲ್ಲಿಯೂ ಇಂಥದ್ದೇ ಅಕ್ರಮ ನಡೆದಿತ್ತು. ಬ್ಲೂಟೂತ್ ನೆರವಿನಿಂದ ಅಕ್ರಮವಾಗಿ ಪರೀಕ್ಷೆ ಬರೆಸುತ್ತಿದ್ದಾನೆ. ಇದರಿಂದ ಪ್ರತಿಭಾನ್ವಿತ, ವಿದ್ಯಾವಂತ ಯುವಕರಿಗೆ ಅನ್ಯಾಯವಾಗುತ್ತಿದೆ ಎಂದು ರಾಮಚಂದ್ರ ಬಾಳೇಶಪ್ಪ ಎನ್ನುವವರು ದೂರು ನೀಡಿದ್ದರು.

ಅಕ್ರಮದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ನೀಡಿದ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಾಜಿ ಸಚಿವ ವಿನಯ್ ಕುಲ್ಕರ್ಣಿಗೆ ಹಿನ್ನಡೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button