*PSI ನೇಮಕಾತಿ ಮರುಪರೀಕ್ಷೆ ಮುಂದೂಡಿಕೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: 545 ಪಿಎಸ್ ಐ ನೇಮಕಾತಿ ಹುದ್ದೆ ಮರುಪರೀಕ್ಷೆ ದಿನಾಂಕವನ್ನು ಮುಂಡೂಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪಿಎಸ್ ಐ ನೇಮಕಾತಿ ಮರುಪರೀಕ್ಷೆಯನ್ನು ಡಿಸೆಂಬರ್ 23ರ ಬದಲಾಗಿ ಒಂದು ತಿಂಗಳ ಕಾಲ ಮುಂದೂಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಇದೇ ಡಿಸೆಂಬರ್ 23ಕ್ಕೆ ಪಿಎಸ್ ಐ ನೇಮಕಾತಿ ಮರುಪರೀಕ್ಷೆ ನಿಗದಿಯಾಗಿತ್ತು. ಕಲಾವಕಾಶ ಕಡಿಮೆ ಇರುವುದರಿಂದ ಅಭ್ಯರ್ಥಿಗಳು ಪರೀಕ್ಷೆ ದಿನಾಂಕ ಮುಂದೂಡುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಮರುಪರೀಕ್ಷೆ ದಿನಾಂಕವನ್ನು 2024ರ ಜನವರಿ 23ಕ್ಕೆ ಅಂದರೆ ಒಂದು ತಿಂಗಳು ಮುಂದೂಡಲಾಗಿದೆ. ಈ ಬಾರಿ ನೇಮಕಾತಿ ಪರೀಕ್ಷೆಯನ್ನು ಜಿಲ್ಲಾ ಕೇಂದ್ರಗಳಲ್ಲಿ ನಡೆಸಲ್ಲ. ಪರೀಕ್ಷಾ ಅಕ್ರಮ ಪ್ರಕರಣ ಹೆಚ್ಚುತ್ತಿರುವುದರಿಂದ ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ