ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ಒಟ್ಟು 6 ಆರೋಪಿಗಳು ಜಾಮೀನಿಗಾಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ನ್ಯಾ.ಹೆಚ್.ಪಿ.ಸಂದೇಶ್ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಐವರು ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ.
ಆರೋಪಿಗಳಾದ ಸಿ.ಎನ್.ಶಶಿಧರ್, ಆರ್.ಶರತ್ ಕುಮಾರ್, ದಿಲೀಪ್ ಕುಮಾರ್, ರಘುವೀರ್, ಹೆಚ್.ಆರ್ ಪ್ರವೀಣ್ ಹಾಗೂ ಸೂರ್ಯನಾರಾಯಣ ಎಂಬುವವರ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ.
ಇದೇ ವೇಳೆ ಇನ್ನೋರ್ವ ಆರೋಪಿ ನವೀನ್ ಪ್ರಸಾದ್ ನಿರೀಕ್ಷಣಾ ಜಾಮೀನು ಕೂಡ ವಜಾಗೊಂಡಿದೆ ಎನ್ನಲಾಗಿದೆ. ನವೀನ್ ಪ್ರಸಾದ್ ಬ್ಯಾಡರಹಳ್ಳಿ ಠಾಣೆಯ ಪಿಎಸ್ ಐ ಆಗಿದ್ದು, ಅಕ್ರಮದ ಬೆನ್ನಲ್ಲೇ ತಲೆಮರೆಸಿಕೊಂಡಿರುವ ನವೀನ್ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ. ಇದೀಗ ನಿರೀಕ್ಷಣಾ ಜಾಮೀನಿಗೆ ಕೋರ್ಟ್ ನಿರಾಕರಿಸಿದೆ ಎನ್ನಲಾಗಿದೆ.
ಬಿ.ಎಸ್.ವೈ ರಾಜಕೀಯ ನಿವೃತ್ತಿ? ಏನಂದ್ರು ಬಿ.ವೈ.ವಿಜಯೇಂದ್ರ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ