Latest

ಪಿಎಸ್ ಐ ಆತ್ಮಹತ್ಯೆಗೆ ಮೇಲಧಿಕಾರಿ ಕಾರಣ

ಪ್ರಗತಿವಾಹಿನಿ ಸುದ್ದಿ; ಹಾಸನ: ಮೇಲಧಿಕಾರಿ ಒತ್ತಡದಿಂದಾಗಿ ಪಿಎಸ್ ಐ ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಆರೋಪಿಸಿದ್ದಾರೆ.

ಆತ್ಮಹತ್ಯೆಗೆ ಶರಣಾಗಿದ್ದ ಚನ್ನರಾಯಪಟ್ಟಣ ಪಿಎಸ್​ಐ ಕಿರಣ್ ಅವರ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರೇವಣ್ಣ, ಮೇಲಾಧಿಕಾರಿ ಒತ್ತಡದಿಂದ ಪಿಎಸ್​ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನೋದು ನನಗೆ ತಿಳಿದ ಮಾಹಿತಿ. ಪಿಎಸ್​ಐ ಕಿರಣ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಫೋನ್ ಕಿತ್ತುಕೊಂಡಿದ್ದಾರೆ. ಅವರ ಫೋನ್ ಕಾಲ್ ಮತ್ತು ಮೆಸೇಜ್ ಗಳನ್ನು ಡಿಲೀಟ್ ಮಾಡಿರಬಹುದು ಎಂದು ಶಂಕೆ ಇದೆ ಎಂದರು.

ಪಿಎಸ್​ಐ ಕಿರಣ್ ಮೊಬೈಲ್ ಅನ್ನು ಐಜಿಪಿ ವಿಫುಲ್ ಕುಮಾರ್ ವಶಪಡಿಸಿಕೊಂಡಿದ್ದಾರೆ. ಅವರ ಮನೆಯವರ ಸಮ್ಮುಖದಲ್ಲಿ ಮೊಬೈಲ್ ಡಿಟೇಲ್ ಮಹಜರ್ ತೆಗೆಯಬೇಕಿತ್ತು. ಆದರೆ, ಹಾಗೆ ಮಾಡಿಲ್ಲ. ಆತ್ಮಹತ್ಯೆ ಮಾಡಿಕೊಂಡ ತಕ್ಷಣ ಅವರ ಮನೆಯವರ ಮುಂದೆ ತನಿಖೆ ನಡೆಸಬೇಕಿತ್ತು. ಹಾಗೆ ಮಾಡಿಲ್ಲ ಎಂದು ಹಿರಿಯ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಜಿಲ್ಲೆಯಲ್ಲಿ ಪೊಲೀಸ್ ವರ್ಗಾವಣೆ ದಂಧೆ ಕೇವಲ ಒಬ್ಬ ಶಾಸಕ ಹಾಗೂ ಓರ್ವ ಸರ್ಕಲ್ ಇನ್ಸ್ ಪೆಕ್ಟರ್ ಕೈಯಲ್ಲಿದೆ. ಈ ಪ್ರಕರಣ ಸಿಬಿಐ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button