ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ; ಅವಾಚ್ಯ ಶಬ್ಧಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ಕಲಬುರ್ಗಿ ಜಿಲ್ಲೆ ಸೇಡಂ ಠಾಣೆ ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಪಿಎಸ್ಐ ನಾಡಗೌಡ ಪಾಟೀಲ್ ವಿರುದ್ಧ ಕಾಲಬುರ್ಗಿ ಗ್ರಾಮೀಣ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 47 ಜಾನುವಾರುಗಳನ್ನು ಸೇಡಂ ಠಾಣೆ ಪಿಎಸ್ ಐ ನಾಡಗೌಡ ನೇತೃತ್ವದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಹೀಗೆ ವಶಕ್ಕೆ ಪಡೆಯಲಾಗಿದ್ದ ಜಾನುವಾರುಗಳನ್ನು ಜಿಲ್ಲಾಡಳಿತದ ಸೂಚನೆ ಮೇರೆಗೆ ನಂದಿ ಅನಿಮಲ್ ವೆಲ್ಫೇರ್ ಸೊಸೈಟಿ ಹುಣಚಿರಾಯ್ ಮೋಟಗಿ ಅವರ ಗೋ ಶಾಲೆಗೆ ನೀಡಲಾಗಿತ್ತು. ಆದರೆ ಅದರಲ್ಲಿ ಒಂದು ಜಾನುವಾರು ಸಾವನ್ನಪ್ಪಿತ್ತು. ಈ ವಿಚಾರವಾಗಿ ಪಿಎಸ್ಐ ನಾಡಗೌಡ, ಹುಣಚಿರಾಯ್ ಮೋಟಗಿಯವರುಗೆ ಫೋನ್ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಈ ಕುರಿತು ಹುಣಚಿರಾಯ್ ಕಲಬುರ್ಗಿ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ನಾಡಗೌಡ ವಿರುದ್ಧ ದೂರು ದಾಖಲಿಸಿದ್ದು, ನಿಂದನೆ ಆರೋಪ ಹಿನ್ನೆಲೆಯಲ್ಲಿ ನಾಡಗೌಡ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಭಾರಿ ಮಳೆಗೆ ಕುಸಿದ ಗೋಡೆ; 11ಕ್ಕೂ ಹೆಚ್ಚು ಜನರ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ