Latest

ಪಿಎಸ್ ಐ ಅಕ್ರಮ; 11 ಪೊಲೀಸ್ ಸಿಬ್ಬಂದಿಗಳು ಅಮಾನತು

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮದ ಬಗ್ಗೆ ದಿನಕ್ಕೊಂದು ಮಾಹಿತಿ ಹೊರಬರುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ 11 ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ನೀಡಲಾಗಿದೆ.

ಪಿಎಸ್ ಐ ನೇಮಕಾತಿಗಾಗಿ ಕಲಬುರ್ಗಿಯಲ್ಲಿ ನಡೆದಿದ್ದ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿ ಭಾಗಿಯಾಗಿದ್ದ ಕಲಬುರ್ಗಿ ಸ್ಟೇಷನ್ ಬಜಾರ್ ಠಾಣೆಯ ಮೂವರು ಸಿಬ್ಬಂದಿಗಳು ಹಾಗೂ ಮಹಿಳಾ ಠಾಣೆಯ 8 ಸಿಬ್ಬಂದಿಗಳು ಸೇರಿ ಒಟ್ಟು 11 ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಮಧ್ಯಾಹ್ನದ ವೇಳೆ ಅಮಾನತು ಆದೇಶ ಹೊರಬೀಳಲಿದೆ. ಸಿಬ್ಬಂದಿಗಳು ಕರ್ತವ್ಯಲೋಪವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button