Latest

ಪಿಎಸ್ ಐ ಅಕ್ರಮ; ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಟಾಂಪ್ ವೆಂಡರ್ ಅರೆಸ್ಟ್; ಪ್ರಭಾವಿ ವ್ಯಕ್ತಿ ಪರಾರಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮುಡಿಸಿರುವ ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಇದೀಗ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬೆಕ್ಕ ಗ್ರಾಮ ಪಂಚಾಯತ್ ಅಧ್ಯಕ್ಷ, ಸ್ಟ್ಯಾಂಪ್ ವೆಂಡರ್ ಕೇಶವಮೂರ್ತಿ ಎಂಬಾತನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಕೇಶವ ಮೂರ್ತಿ ಪಿಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ.

ಇನ್ನೊಂದೆಡೆ ಪಿಎಸ್ ಐ ಹುದ್ದೆ ಅಕ್ರಮದಲ್ಲಿ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದು, ಸಿಐಡಿ ಹುಡುಕುತ್ತಿರುವ ಪ್ರಭಾವಿ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ತಿಇದುಬಂದಿದೆ. ಆತನಿಗಾಗಿ ತೀವ್ರ ಶೋಧ ಮುಂದುವರೆದಿದೆ.

ಮದುವೆ ಮೆರವಣಿಗೆ ವೇಳೆ ಹರಿದ ಡಿಜೆ ಲಾರಿ; ನಾಲ್ವರ ದುರ್ಮರಣ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button