ಬಿಜೆಪಿ ನಾಯಕಿ ದಿವ್ಯಾ ಹಾಗರಗಿಗೆ ಪುಣೆಯಲ್ಲಿ ಆಶ್ರಯ ನೀಡಿದ್ದೇ ಕಾಂಗ್ರೆಸ್ ನಾಯಕರು -ಗೃಹ ಸಚಿವ ಅರಗ ಜ್ಞಾನೆಂದ್ರ ಆರೋಪ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಸಿಐಡಿ ನಿಸ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಆರೋಪ ಮಾಡುವುದರಲ್ಲಿ ತೊಡಗಿದ್ದಾರೆ. ಆರೋಪಿ ದಿವ್ಯಾ ಹಾಗರಗಿಗೆ ಆಶ್ರಯ ನೀಡಿದ್ದೇ ಕಾಂಗ್ರೆಸ್ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪಿಎಸ್ ಐ ಅಕ್ರಮದಲ್ಲಿ ಕಾಂಗ್ರೆಸ್ ನವರೇ ಭಾಗಿಯಾಗಿದ್ದಾರೆ. ಬಿಜೆಪಿ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗುತ್ತಿರುವ ದಿವ್ಯಾ ಹಾಗರಗಿಗೆ ಪುಣೆಯಲ್ಲಿ ಆಶ್ರಯ ನೀಡಿದವರೇ ಕಾಂಗ್ರೆಸ್ ನವರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೇ ಪಿಎಸ್ ಐ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ನಾಯಕರು ತಮ್ಮ ಬಳಿ ಆ ದಾಖಲೆ ಇದೆ, ಈ ದಾಖಲೆ ಇದೆ ಎಂದು ಹೇಳುತ್ತಿದ್ದಾರೆ. ದಾಖಲೆ ಇದ್ದರೆ ಸಿಐಡಿಗೆ ತಂದು ಕೊಡಲಿ. ಸಿಐಡಿ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಹೇಳುತ್ತಿದ್ದಾರೆ. ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುತ್ತಿಲ್ಲ, ನಿಸ್ಪಕ್ಷಪಾತ ತನಿಖೆಗೆ ಸಿಐಡಿಗೆ ಸೂಚಿಸಲಾಗಿದೆ ಎಂದರು.
ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡುವ ಮೊದಲು ಯೋಚಿಸಬೇಕು. ಅವರ ಕಾಲದಲ್ಲಿಯೂ ಪರೀಕ್ಷಾ ಅಕ್ರಮ ನಡೆದಿದೆ. ಕಾಂಗ್ರೆಸ್ ಅವಧಿಯಲ್ಲಿ ನಾಲ್ಕು ಬಾರಿ ಪಿಯು ಪ್ರಶ್ನೆ ಪತ್ರಿಕೆ ಲೀಕ್ ಆಗಿತ್ತು. ಅನೇಕ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣದ ಬಗ್ಗೆ ತನಿಖೆ ಯಾಕೆ ನಡೆಸಿಲ್ಲ. ಅನಗತ್ಯವಾಗಿ ನಮ್ಮ ವಿರುದ್ಧ ಆರೋಪ ಮಾಡುವ ಬದಲು ದಾಖಲೆಗಳಿದ್ದರೆ ತಂದುಕೊಡಲಿ ಎಂದು ಹೇಳಿದರು.
ಪಿಎಸ್ ಹುದ್ದೆ ಅಕ್ರಮ; ಮತ್ತೋರ್ವ ಪೊಲೀಸ್ ಪೇದೆ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ