ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನ ಬಳಿಕ ಇದೀಗ ಒಬ್ಬೊಬ್ಬರಾಗಿ ಶರಣಾಗುತ್ತಿದ್ದಾರೆ.
ಕಲಬುರ್ಗಿ ಜ್ಞಾನಜ್ಯೋತಿ ಶಾಲೆ ಹೆಡ್ ಮಾಸ್ಟರ್ ಕಾಶಿನಾಥ್ ಇಂದು ಸಿಐಡಿ ಪೊಲೀಸರಿಗೆ ಶರಣಾಗಿದ್ದಾನೆ. ತಾನಾಗಿಯೇ ಸಿಐಡಿ ಕಚೇರಿಗೆ ಬಂದು ಶರಣಾಗಿದ್ದು, ಅಚ್ಚರಿಗೆ ಕಾರಣವಾಗಿದೆ.
ಕಳೆದ 22 ದಿನಗಳಿಂದ ನಾಪತ್ತೆಯಾಗಿದ್ದ ಕಾಶಿನಾಥ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಅಕ್ರಮದ ಕಿಂಗ್ ಪಿನ್ ಗಳಾದ ರುದ್ರಗೌಡ ಪಾಟೀಲ್, ನೀರಾವರಿ ಇಲಾಖೆ ಎಇ ಮಂಜುನಾಥ್ ಮೇಳಕುಂದಿ ಜತೆ ಕಾಶಿನಾಥ್ ಸಂಪರ್ಕ ಹೊಂದಿದ್ದ. ಅಕ್ರಮ ನದೆಸಲು ಸಹಕರಿಸುವಂತೆ ದಿವ್ಯಾ ಹಾಗರಗಿಯನ್ನು ಒಪ್ಪಿಸಿದ್ದ ಎಂದು ತಿಳಿದುಬಂದಿದೆ.
ಪಿಎಸ್ ಐ ಅಕ್ರಮಕ್ಕೆ ಸಂಬಂಧಿಸಿದಂತೆ ಈವರೆಗೆ ಸಿಐಡಿ ಪೊಲೀಸರು 26 ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ