ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ವಿರುದ್ಧ ಒಂಎಂ ಆರ್ ಶೀಟ್ ತಿದ್ದುಪಡಿ ಆರೋಪ ಕೇಳಿಬಂದಿತ್ತು.
ಎಡಿಜಿಪಿ ಅಮೃತ್ ಪೌಲ್ ವಿರುದ್ಧ ಪಿಎಸ್ ಐ ಹುದ್ದೆಯ 25 ಪೋಸ್ಟ್ ಗಳಿಗೆ ತಲಾ 30 ಲಕ್ಷ ರೂ ಹಣ ಪಡೆದ ಹಾಗೂ ಓಎಂಆರ್ ಶೀಟ್ ನ್ನು ತಮ್ಮ ಕಚೇರಿಯಲ್ಲಿಯೇ ತಿದ್ದಲು ಅವಕಾಶ ನೀಡಿದ್ದರು ಎಂದು ದೂರಲಾಗಿತ್ತು ಪ್ರಕರಣದಲ್ಲಿ ಅಮೃತ್ ಪೌಲ್ ನೇರವಾಗಿ ಭಾಗಿಯಾಗಿದ್ದಾರೆ ಎನ್ನಲಾಗಿತ್ತು.
ಈ ಹಿನ್ನೆಲೆಯಲ್ಲಿ ಅಮೃತ್ ಪೌಲ್ ಅವರನ್ನು ಮೂರು ಬಾರಿ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಇಂದು ನಾಲ್ಕನೇ ಬಾರಿಗೆ ವಿಚಾರಣೆಗೆ ಕರೆದಿದ್ದ ಸಿಐಡಿ ಅಧಿಕಾರಿಗಳು ವಿಚಾರಣೆ ಬಳಿಕ ಪೌಲ್ ಅವರನ್ನು ಬಂಧಿಸಿದ್ದಾರೆ. ಅಮೃತ್ ಪೌಲ್ ವಿರುದ್ಧ ಸಾಕಷ್ಟು ಸಾಕ್ಷಾಧಾರಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ.
ಈ ಮೂಲಕ ಇದೇ ಮೊದಲ ಬಾರಿಗೆ ಎಡಿಜಿಪಿ ಹುದ್ದೆಯ ಅಧಿಕಾರಿಯೊಬ್ಬರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದಂತಾಗಿದೆ.
ಪ್ರಧಾನಿ ಕಚೇರಿಯ ಅಧಿಕಾರಿ ಹೆಸರಲ್ಲಿ ಜಿಲ್ಲಾಧಿಕಾರಿಗೆ ವಂಚನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ