*ಇಂದು ಪಿಎಸ್ಐ ಪರೀಕ್ಷೆ: ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಜ್ಯಾದ್ಯಂತ ಇಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು. ಈಗಾಗಲೇ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಕೆಇಎ ಕಠಿಣ ಕ್ರಮ ಕೈಗೊಂಡಿದೆ.
402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಲಿಖಿತ ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಸಲಾಗಿದೆ.
ಕಳೆದ ಬಾರಿ ನಡೆದ ಅಕ್ರಮದ ಹಿನ್ನಲೆ ಈ ಬಾರಿ ಬೀಗಿಭದ್ರತೆ ಮಾಡಲಾಗಿದ್ದು, ಅದರಲ್ಲೂ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ ಮತ್ತು ದಾವಣಗೆರೆ ನಗರ ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಅತ್ಯಂತ ಕಠಿಣ ರೂಲ್ಸ್ ಜಾರಿ ಮಾಡಲಾಗಿದೆ.
ಈ ಹಿಂದೆ ಸೆ.22ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆ ದಿನಾಂಕದಂದೇ ಯುಪಿಎಸ್ಸಿ ಮುಖ್ಯ ಪರೀಕ್ಷೆ ಇದ್ದ ಕಾರಣ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಇಂದು ಪರೀಕ್ಷೆ ನಡೆಯುತ್ತಿದ್ದು ಒಟ್ಟು 66,990 ಮಂದಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅರ್ಹರಾಗಿದ್ದು, ಅದರಲ್ಲಿ ಬೆಂಗಳೂರಿನಲ್ಲೇ ಅತಿ ಹೆಚ್ಚು ಅಂದರೆ 21,875 ಮಂದಿ ಪರೀಕ್ಷೆ ಬರೆಯಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ