Kannada NewsKarnataka NewsPolitics

*ಸಿಬ್ಬಂದಿಗಳನ್ನು ಬಿಸಲಲ್ಲಿ ನಿಲ್ಲಿಸಿ ದರ್ಪ ತೋರಿದ್ದ ಪಿಎಸ್ಐ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದಲ್ಲಿ ಪಿಎಸ್ಐ ಕರ್ತವ್ಯನಿರತ ಪೊಲೀಸರನ್ನೇ ಅಮಾನವೀಯವಾಗಿ ಸುಡುವ ಬಿಸಿಲಿನಲ್ಲಿ ನಿಲ್ಲಿಸಿ ದರ್ಪ ತೋರಿದ್ದರು. ಈ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆಗೆ ಆದೇಶಿಸಿದ್ದು, ಚಿಕ್ಕಜಾಜೂರು ಪಿಎಸ್‌ಐ ನೇತ್ರಾವತಿ ಅವರಿಗೆ ವರ್ಗಾಯಿಸಲಾಗಿದೆ .

ಪಿಎಸ್‌ಐ ನೇತ್ರಾವತಿ ಅವರ ನಡೆಯನ್ನು ಗಂಭೀರವಾಗಿ ಪರಿಗಣಿಸಿರುವ ಎಸ್‌ಪಿ ರಂಜಿತ್ ಕುಮಾ‌ರ್ ಬಂಡಾರು ಅವರು, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಗೆ ನಿಯೋಜಿಸಿ ಆದೇಶ ಹೊರಡಿಸಿದ್ದಾರೆ.

ಕೆಲವು ದಿನಗಳ ಹಿಂದೆ ಪಿಎಸ್‌ಐ ನೇತ್ರಾವತಿ ಅವರು ತಮ್ಮ ಕೈ ಕೆಳಗಿನ ಸಿಬ್ಬಂದಿಯನ್ನು ಸುಮಾರು ಮೂರು ಗಂಟೆಗಳ ಕಾಲ ಸುಡುವ ಬಿಸಿಲಿನಲ್ಲಿ ನಿಲ್ಲಿಸುವ ಮೂಲಕ ಅಮಾನವೀಯತೆ ಮೆರೆದಿದ್ದರು. 

ಸದ್ಯ ಈ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಲು ಡಿವೈಎಸ್ಪಿ ಅರುಣ್ ಗೌಡ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಲಿರುವ ಅರುಣ್‌ ಗೌಡ ಅವರು ಶೀಘ್ರದಲ್ಲೇ ವರದಿ ಸಲ್ಲಿಸಲಿದ್ದಾರೆ.

ತನಿಖೆ ಪೂರ್ಣಗೊಂಡು ವರದಿ ಕೈ ಸೇರಿದ ನಂತರ ಪಿಎಸ್‌ಐ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ತಮ್ಮದೇ ಇಲಾಖೆಯ ಸಿಬ್ಬಂದಿಯ ಮೇಲೆ ತೋರಿದ ಈ ದರ್ಪಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ತನಿಖೆ ಮುಗಿಯುವವರೆಗೂ ಪಿಎಸ್‌ಐ ನೇತ್ರಾವತಿ ಅವರು ಜಿಲ್ಲಾ ನಿಯಂತ್ರಣ ಕೊಠಡಿಯಲ್ಲೇ ಇರಬೇಕೆಂದು ಎಸ್‌ಪಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button