Latest

ನಿವೃತ್ತಿಗೆ ಒಂದು ದಿನ ಇರುವಾಗ ಕೊರೊನಾಗೆ ಬಲಿಯಾದ ಪಿಎಸ್ ಐ

ಪ್ರಗತಿವಾಹಿನಿ ಸುದ್ದಿ; ವಿಜಯನಗರ: ನಿವೃತ್ತಿಗೆ ಒಂದು ದಿನ ಮೊದಲು ಪಿಎಸ್ ಐ ಓರ್ವರು ಕೊರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಬೆಳಕಿಗೆ ಬಂದಿದೆ.

ಯಲ್ಲಪ್ಪ ಕದ್ರಳ್ಳಿ (60) ಕೋವಿಡ್ ಗೆ ಬಲಿಯಾದ ಪಿಎಸ್ ಐ. ಕಳೆದ 15 ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಕೊನೆಯುಸಿರೆಳೆದಿದ್ದಾರೆ.

Home add -Advt

ಹೊಸಪೇಟೆ ಪೊಲೀಸ್ ಠಾಣೆಯ ಪಿಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಯಲ್ಲಪ್ಪ ಇಂದು ಸೇವೆಯಿಂದ ನಿವೃತ್ತಿಯಾಗಲಿದ್ದರು. ನಿವೃತ್ತಿಗೂ ಒಂದು ದಿನ ಮೊದಲು ಕೋವಿಡ್ ನಿಂದ ಮೃತಪಟ್ಟಿದ್ದಾರೆ.
ರಮೇಶ್ ಜಾರಕಿಹೊಳಿ ಪರ ಆರ್.ಅಶೋಕ್

Related Articles

Back to top button