ಪ್ರಗತಿವಾಹಿನಿ ಸುದ್ದಿ; ರಾಯಚೂರು: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಓರ್ವವರ ವಿರುದ್ಧ ಎಫ್ಐಆರ್ ದಾಖಲಾಗಿರುವ ಘಾನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ನಿರುಪಾದಿ ಎಂಬುವವರ ಮೇಲೆ ಪಿಎಸ್ಐ ಮಣಿಕಂಠ ಎಂಬುವವರು ಹಲ್ಲೆ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಸ್ಕಿ ಠಾಣೆಯಲ್ಲಿ ಮಣಿಕಂಠ ವಿರುದ್ಧ ಪ್ರಕರಣ ದಾಖಲಾಗಿದೆ.
ಸೆ.20ರಂದು ನಿರುಪಾದಿ ಎಂಬುವವರು ಮಸ್ಕಿ ಪಟ್ಟಣದಲ್ಲಿ ಟ್ರ್ಯಾಕ್ಟರ್ ನಲ್ಲಿ ಮಣ್ಣು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಪಿಎಸ್ ಐ ಮಣಿಕಂಠ, ಟ್ರ್ಯಾಕ್ಟರ್ ಚಾಲಕನನ್ನು ತಡೆದು, ಟ್ರ್ಯಾಕ್ಟರ್ ನಲ್ಲಿ ಮಣ್ಣು ಸಾಗಿಸಲು 20 ಸಾವಿರ ರೂಪಾಯಿ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದು ಪಿಎಸ್ ಐ ಮಣಿಕಂಠ, ತನ್ನ ಜೀಪ್ ನಲ್ಲಿದ್ದ ಪೈಪ್ ತೆಗೆದುಕೊಂಡು ಬಂದು ಟ್ರ್ಯಾಕ್ಟರ್ ಚಾಲಕ ನಿರುಪಾದಿಗೆ ಮನಬಂದಂತೆ ಥಳಿಸಿದ್ದರು. ಅಲ್ಲದೇ ಜಾತಿ ನಿಂದನೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ. ಮಸ್ಕಿ ಠಾಣೆಯಲ್ಲಿ ಪಿಎಸ್ ಐ ವಿರುದ್ಧ ದೂರು ದಾಖಲಾಗಿತ್ತು
ಹಲ್ಲೆಗೊಳಗಾದ ನಿರುಪಾದಿ ಮಸ್ಕಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಘಟನೆ ಬೆನ್ನಲ್ಲೇ ಪಿಎಸ್ ಐ ದೌರ್ಜನ್ಯ ಖಂಡಿಸಿ ಜನರು ಎರಡು ದಿನಗಳಿಂದ ಪ್ರತಿಭಟನೆ ನಡೆಸಿದ್ದರು. ಪಿಎಸ್ ಐ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಇದೀಗ ಪಿಎಸ್ ಐ ಮಣಿಕಂಠ ವಿರುದ್ಧ ಮಸ್ಕಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ