ಪ್ರಗತಿವಾಹಿನಿ ಸುದ್ದಿ: ಮಹಿಳಾ ಪಿಎಸ್ಐ ಓರ್ವರು ಕ್ಯಾನ್ಸರ್ ನಿಂದ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಗಾಯತ್ರಿ (51) ಮೃತ ಪಿಎಸ್ಐ. ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಕಳೆದ 30 ವರ್ಷಗಳಿಂದ ಗಾಯತ್ರಿ ಕೆಜಿಎಫ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಗಾಯತ್ರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಕ್ಯಾನ್ಸರ್ ನಿಂದ ಸಾವನ್ನಪ್ಪಿರುವ ಪಿಎಸ್ಐ ಗಾಯತ್ರಿಗೆ ಕೆಜಿ ಎಫ್ ಎಸ್ ಪಿ ಶಾಂತರಾಜು, ಡಿವೈ ಎಸ್ ಪಿ ಪಾಂಡುರಂಗ ಮೊದಲಾದವರು ಸಂತಾಪ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ