Kannada NewsKarnataka NewsLatest

*ಹಲ್ಲೆ ಪ್ರಕರಣ: PSI ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಓರ್ವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

ರಾಯಚೂರು ಜಿಲ್ಲೆಯ ಮಸ್ಕಿ ಠಾಣೆಯ ಮಣಿಕಂಠ ಅಮಾನತುಗೊಂಡ ಪಿಎಸ್ಐ. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಆರೋದ ಮೇಲೆ ಟ್ರ್ಯಾಕ್ಟರ್ ಚಾಲಕ ನಿರುಪಾದಿ ಎಂಬುವವರ ಮೇಲೆ ಪಿಎಸ್ಐ ಮಣಿಕಂಠ ಮನಬಂದಂತೆ ಥಳಿಸಿದ್ದರು. ಪಿಎಸ್ಐ ಮಣಿಕಂಠ ವಿರುದ್ಧ ಮಸ್ಕಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು.

ಅಲ್ಲದೇ 20 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟ ಆರೋಪವು ಕೇಳಿಬಂದಿತ್ತು. ಪಿಎಸ್ಐ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಬಳ್ಳಾರಿ ವಲಯ ಐಜಿಪಿ ಲೋಕೇಶ್ ಕುಮಾರ್, ಪಿಎಸ್ಐ ಮಣಿಕಂಠ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.


Home add -Advt

Related Articles

Back to top button