Kannada NewsKarnataka NewsLatest

*ಸಿಬ್ಬಂದಿಗಳನ್ನು ಅರ್ಧದಿನ ರಣ ಬಿಸಿಲಿನಲ್ಲಿ ಬಂದೂಕು ಹೊತ್ತು ನಿಲ್ಲುವಂತೆ ಶಿಕ್ಷೆ ವಿಧಿಸಿದ ಪಿಎಸ್ಐ*

ಪ್ರಗತಿವಾಹಿನಿ ಸುದ್ದಿ: ಪಿಎಸ್ ಐ ಓರ್ವರು ತಮ್ಮ ಸಿಬ್ಬಂದಿಗೆ ಬಂದೂಕು ಕೈಯಲ್ಲಿ ಹಿಡಿದು ರಣಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ವಿಧಿಸಿರುವ ಆರೋಪ ಕೇಳಿಬಂದಿದೆ.

ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಠಾಣೆ ಪಿಎಸ್ ಐ ನೇತ್ರಾವತಿ ಪೊಲೀಸ್ ಸಿಬ್ಬಂದಿಗೆ ನಿನ್ನೆ ಏಪ್ರಿಲ್ 06ರಂದು ಮಧ್ಯಾಹ್ನ 2ರಿಂದ 5 ಗಂಟೆಯವರೆಗೆ ರಣಬಿಸಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ ವಿಧಿಸಿದ್ದಾರೆ.

ಅರ್ಧದಿನ ರಣಬಿಸಿಲಿನಲ್ಲಿ ನಿಲ್ಲಿಸಿದ್ದಕ್ಕೆ ಕೆಲ ಪೊಲೀಸ್ ಸಿಬ್ಬಂದಿ ಆರೋಗ್ಯದಲ್ಲಿ ಏರುಪೇರಾಗಿರುವುದು ಕಂಡುಬಂದಿದ್ದು, ಕೂಡಲೇ ಹೊಳಲ್ಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಪಿಎಸ್​​ಐ ನೇತ್ರಾವತಿ ನಡೆ ಬಗ್ಗೆ ಪರ ವಿರೋಧದ ಚರ್ಚೆಗಳು ನಡೆದಿದ್ದು, ಕೆಲ ಸಿಬ್ಬಂದಿ, ಪಿಎಸ್​ಐ ನೇತ್ರಾವಳಿ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡಿದ್ದಾರೆ.

ಇದನ್ನು ಗಂಭೀರವಾಗಿ ಪರಿಗಣಿಸಿದ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಬಂಡಾರು ಅವರು ಡಿವೈಎಸ್ಪಿ ಅರುಣ್ ಗೌಡ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ. ನಿಜಕ್ಕೂ ರಣಬಿಸಿಲಿನಲ್ಲಿ ಅರ್ಧದಿನ ನಿಲ್ಲಿಸಿದ್ದರಾ? ಸಿಬ್ಬಂದಿಗಳ ಯಾವ ತಪ್ಪಿಗೆ ಈ ರೀತಿ ಅರ್ಧದಿನ ರಣ ಬಿಸಿಲಿನಲ್ಲಿ ಬಂದೂಕು ಹೊತ್ತು ನಿಲ್ಲುವಂತೆ ಪಿಎಸ್ ಐ ಶಿಕ್ಷೆ ವಿಧಿಸಿದ್ದಾರೆ? ಎಂದು ಇನ್ನಷ್ಟೇ ತಿಳಿಯಬೇಕಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button