
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 545 ಪಿಎಸ್ ಐ ಹುದ್ದೆಗಳಿಗೆ ಮರು ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕ ನಿಗದಿ ಮಾಡಿದೆ.
ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಡಿಸೆಂಬರ್ 23ರಂದು ಮರು ಪರೀಕ್ಷೆ ನಡೆಯಲಿದೆ.
545 ಪಿಎಸ್ ಐ ಹುದ್ದೆ ನೇಮಾಕಾತಿ ಪರೀಕ್ಷೆಯಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಲೇ ಅಕ್ರಮದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಹಲವರನ್ನು ಬಂಧಿಸಲಾಗಿತ್ತು. ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಡಿ.23ರಂದು ಪರೀಕ್ಷೆ ನಿಗದಿಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ