ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜುಲೈ 15ರಿಂದ ಪಿಯು ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮೊದಲ ಹಂತದಲ್ಲಿ ಆನ್ ಲೈನ್ ತರಗತಿಗಳನ್ನು ಆರಂಭಿಸುವ ಬಗ್ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಕುರಿತು ಪಿಯು ಬೋರ್ಡ್ ನಿರ್ದೇಶಕಿ ಸ್ನೇಹಲ್ ಮಾಹಿತಿ ನೀಡಿದ್ದು, ಮೊದಲ ಹಂತದಲ್ಲಿ ಆನ್ ಲೈನ್ ಮೂಲಕ ತರಗತಿ ಆರಂಭಿಸಲು ನಿರ್ಧರಿಸಿದ್ದು, ಭೌತಿಕವಾಗಿ ತರಗತಿ ಆರಂಭ ವಿಚಾರವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಜುಲೈ ಅಂತ್ಯದ ವೇಳೆ ಭೌತಿಕ ತರಗತಿಗಳು ಆರಂಭವಾಗುವ ಸಾಧ್ಯತೆಯಿದೆ ಎಂದಿದ್ದಾರೆ.
ರಾಜ್ಯದಲ್ಲಿ ಸದ್ಯ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಹಂತ ಹಂತವಾಗಿ ಶೈಕ್ಷಣಿಕ ವರ್ಷ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಹೇಳಿದರು.
ಸಿಎಂ ಯಡಿಯೂರಪ್ಪ ಜೊತೆ ಜೆ.ಪಿ.ನಡ್ಡಾ ವೀಡಿಯೋ ಸಂವಾದ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ