Kannada NewsKarnataka NewsLatest

*ಕಾಂಗ್ರೆಸ್ ಸೇರ್ಪಡೆ ವಿಚಾರ; ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹರಡುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ರಾಜ್ಯ ರಾಜಕೀಯದಲ್ಲಿ ಇನ್ನಷ್ಟು ಕುತೂಹಲ ಹೆಚ್ಚಿಸಿದೆ. ಇದೀಗ ಈ ಬೆಳವಣಿಗೆಗಳ ಬಗ್ಗೆ ಸ್ವತ: ಎಸ್.ಟಿ.ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಟಿ.ಸೋಮಶೇಖರ್, ನಾನು ಯಾವ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಕಾಂಗ್ರೆಸ್ ಸೇರುವ ಪ್ರಶ್ನೆಯೂ ಇಲ್ಲ ಎಂದು ಹೇಳಿದ್ದಾರೆ.

ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ನಾನು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೆ. ಕ್ಷೇತ್ರ ವಿಚಾರವಾಗಿ ಸಿಎಂ ಭೇಟಿಯಾಗುವುದೂ ತಪ್ಪಾ? ಎಂದು ಪ್ರಶ್ನಿಸಿದ್ದಾರೆ.

ನನಗೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಗಮನವಿದೆ. ಆ ಕಾರಣಕ್ಕಾಗಿ ಆಗಾಗ ಸರ್ಕಾರದ ಪ್ರತಿನಿಧಿಗಳನ್ನು, ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೇನೆ. ಈ ಭೇಟಿಯನ್ನೇ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಸೇರುತ್ತೇನೆ ಎಂದು ವಿಪರೀತ ಅರ್ಥ ಕಲ್ಪಿಸಿ ಹೇಳುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

Related Articles

Back to top button