ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಯು ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ ರವಿಕಾಂತೇಗೌಡ ತಿಳಿಸಿದ್ದಾರೆ.
ಪಿಯು ವಿದ್ಯಾರ್ಥಿಗಳು ವಾಹನ ಚಾಲನಾ ಪರವಾನಗಿ-ಡಿಎಲ್ ಪಡೆಯಲು ಅರ್ಹತೆ ಹೊಂದಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಪಿಯು ವಿದ್ಯಾರ್ಥಿಗಳು ಬೈಕ್ ಅಥವಾ ಸ್ಕೂಟಿ ಗಳನ್ನು ಚಲಾಯಿಸಿಕೊಂಡು ಕಾಲೇಜುಗಳಿಗೆ ಬರುವಂತಿಲ್ಲ ಎಂದು ಸ್ಪಷ್ಟಪಡಿಸಿದರು.
ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಕಳೆದ ಒಂದು ವಾರದಲ್ಲಿ 14 ಪ್ರಕರಣ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು ಆಧರಿಸಿ 12 ಪ್ರಕರಣ ದಾಖಲಾಗಿದೆ. 5ರಿಂದ 10 ಲಕ್ಷ ರೂಪಾಯಿವರೆಗೆ ಬಾಂಡ್ ಬರೆಸಿಕೊಳ್ಳಲಾಗುವುದು. ನಕಲಿ ನಂಬರ್ ಪ್ಲೇಟ್ ಹೊಂದಿರುವ ವಾಹನ ಮಾಲೀಕರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಎಚ್ಚರಿಸಿದರು.
ಎಲೆಕ್ಟ್ರಾನಿಕ್ಸ್ ಆರ್ ಅಂಡ್ ಡಿ ಕೇತ್ರದಲ್ಲಿರುವ ಉದ್ಯಮಿಗಳಿಗೆ ಮುಖ್ಯಮಂತ್ರಿಗಳ ಕರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ