Kannada NewsKarnataka NewsLatest

*ಬೆಂಕಿ ಹಚ್ಚಿಕೊಂಡು ಪಿಯು ವಿದ್ಯಾರ್ಥಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದೆ.

16 ವರ್ಷದ ಆದಿತ್ಯ ಮೃತ ವಿದ್ಯಾರ್ಥಿ. ಎನ್ ಸಿ ಜೆಸಿ ಕಾಲೇಜಿನಲ್ಲಿ ದ್ವಿತೀಯ ಪಿಯು ಓದುತ್ತಿದ್ದ ಆದಿತ್ಯ ಡೊಳ್ಳೇಶ್ವರ ಗ್ರಾಮದ ಅಜ್ಜಿಯ ಮನೆಯಲ್ಲಿದ್ದು ವ್ಯಾಸಂಗ ಮಾಡುತ್ತಿದ್ದ.

Home add -Advt

ಪ್ರಾಂಶುಪಾಲರು ನಿಂದಿಸಿದರು ಎಂದು ಮನನೊಂದು ನಿನ್ನೆ ರಾತ್ರಿ ಅಡಿಕೆ ತೋಟದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿಯನ್ನು ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಇಂದು ಮೃತಪಟ್ಟಿದ್ದಾನೆ.

ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button