
ಪ್ರಗತಿವಾಹಿನಿ ಸುದ್ದಿ: ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪಕ್ಕೆ ಮನನೊಂದ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ.
ತೇಜಸ್ವಿನಿ ದೊಡ್ಡಮನಿ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮುಧೋಳದ ಶಾರದಾ ಪಿಯು ಕಾಲೇಜು ವಿದ್ಯಾರ್ಥಿನಿ. ತೇಜಸ್ವಿನಿ ವಿರುದ್ಧ ಕಾಲೇಜು ಸಿಬ್ಬಂದಿ ನಕಲು ಮಾಡಿದ ಆರೋಪ ಮಾಡಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಕಾಲೆಜಿಗೆ ಪೋಷಕರನ್ನು ಕರೆಸಿ ಬೈದಿದ್ದರಂತೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ವಿದ್ಯಾರ್ಥಿನಿ ಕಾಲೇಜಿನಿಂದ ಹೊರಗೋಡಿಬಂದವಳೇ ಕೆರೆಯತ್ತ ದಾವಿಸಿ ಹೋಗುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ವಿದ್ಯಾರ್ಥಿನಿ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ