Belagavi NewsBelgaum NewsKannada NewsKarnataka NewsNationalPolitics

*ಬೆಳಗಾವಿ ಜಿಲ್ಲೆಯಲ್ಲಿ ಸೆ.5 ರಂದು ಪ್ರಜಾಸೇವೆ ಆಂದೋಲನ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರ್ಕಾರದ ಸೂಚನೆಯನ್ವಯ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಿ, ಸೂಕ್ತ ಪರಿಹಾರ ನೀಡುವ ಉದ್ದೇಶದಿಂದ ಪ್ರಜಾ ಸೇವೆ ಆಂದೋಲನ ಸಭೆ ಶನಿವಾರ (ಸೆ.5) ಖಾನಾಪುರ ತಾಲೂಕಿನ ಲೋಕಮಾನ್ಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಉಸ್ತವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. 

ಪ್ರತಿ ಮಾಹೆಯ 1ನೇ ಹಾಗೂ 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ‌ ಜಿಲ್ಲಾ‌ ಮಟ್ಟದ ಹಾಗೂ

ಪ್ರತಿ ಮಾಹೆಯ 2ನೇ ಹಾಗೂ 4ನೇ ಶನಿವಾರ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ.

ಸಭೆಯಲ್ಲಿ‌ ಸ್ಥಳೀಯ ಶಾಸಕರ ಉಪಸ್ಥಿತರಿರಲಿದ್ದು, ಖಾನಾಪುರ ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button