Latest

ಸೆಲ್ಫ್ ಕ್ವಾರಂಟೈನ್ ಗೆ ಒಳಗಾದ ಸಚಿವ ಬಿ.ಸಿ ಪಾಟೀಲ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ಈಗಾಗಲೇ ಕೆಲ ರಾಜಕೀಯ ನಾಯಕರಿಗೂ ವಕ್ಕರಿಸಿದೆ. ಈಗಾಗಲೇ ಹಲವರು ಕ್ವಾರಂಟೈನ್ ಆಗಿದ್ದಾರೆ. ಇದೀಗ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೂಡ ಒಂದು ವಾರಗಳ ಕಾಲ ಕ್ವಾರಂಟೈನ್ ಆಗಿದ್ದಾರೆ.

ಬಿ.ಸಿ.ಪಾಟೀಲ್ ಅವರ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರು ಬೆಂಗಳೂರಿನ ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿದ್ದರು. ಈ ಹಿನ್ನೆಲೆಯಲ್ಲಿ ಬಿ.ಸಿ.ಪಾಟೀಲ್ ಒಂದು ವಾರ ಕ್ವಾರಂಟೈನ್ ಆಗಿದ್ದಾರೆ. ಬಿ.ಸಿ.ಪಾಟೀಲ್ ಮಾತ್ರವಲ್ಲದೇ ಅವರ ಕುಟುಂಬಸ್ಥರು ಮತ್ತು ಸಿಬ್ಬಂದಿ ವರ್ಗ ಕೂಡ ಕ್ವಾರಂಟೈನ್ ಆಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಬಿ.ಸಿ.ಪಾಟೀಲ್, ಬೆಂಗಳೂರಿನ ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ನನ್ನ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಅವರ ಜೊತೆ ಸಂಪರ್ಕದಲ್ಲಿ ಇದ್ದ ನಾನು ಮತ್ತು ನನ್ನ ಕುಂಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗದವರು ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Related Articles

Back to top button