ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತನ್ನ ಗೆಳತಿ ಜತೆ ಬೇರೊಬ್ಬ ಯುವಕ ಮಾತನಾಡಿದ್ದಾಕ್ಕಾಗಿ ಯುವಕನನ್ನೇ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ದ್ವಿತೀಯ ಪಿಯು ವಿದ್ಯಾರ್ಥಿಯೋರ್ವ 10ನೇ ತರಗತಿ ಓದುತ್ತಿದ್ದ ತನ್ನ ಗರ್ಲ್ ಫ್ರೆಂಡ್ ಜತೆ ಆಕೆಯ ಸಹಪಾಠಿಯೊಬ್ಬ ಮಾತನಾಡಿದ್ದಕ್ಕೆ ಆತನ ಮೇಲೆ ಹಲ್ಲೆ ನಡೆಸಿದ್ದು, ವಿದ್ಯಾರ್ಥಿಯನು ಪೊಲೀಸರು ಬಂಧಿಸಿದ್ದಾರೆ.
ದುರ್ಗಾ ಪ್ರಸಾದ್ ಎಂಬ ವಿದ್ಯಾರ್ಥಿಯನ್ನು ಪಿಯು ವಿದ್ಯಾರ್ಥಿ ಬೈಕ್ ನಲ್ಲಿ ಮನೆಗೆ ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು, ರಾಜೇಂದ್ರನಗರದ ಟಿಪ್ಪು ಸೇತುವೆ ಬಳಿ 7 ಬಾರಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ದುರ್ಗಾ ಪ್ರಸಾದ್ ಸಹಾಯಕ್ಕಾಗಿ ಕೂಗಿಕೊಳ್ಳುತ್ತಿದ್ದಂತೆ ಆರೋಪಿ ವಿದ್ಯಾರ್ಥಿ ಪರಾರಿಯಾಗಿದ್ದಾನೆ. ಸ್ಥಳೀಯ ಪೊಲೀಸ್ ಸಿಬ್ಬಂದಿ ಗಾಯಾಳು ವಿದ್ಯಾರ್ಥಿ ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಸಧ್ಯ ಆರೋಪಿ ಪಿಯು ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಗ್ರರಿಗೆ ಆರ್ಥಿಕ ನೆರವು; ಯಾಸಿನ್ ಮಲಿಕ್ ಅಪರಾಧಿ ಎಂದು ತೀರ್ಪು ನೀಡಿದ ಕೋರ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ