Karnataka News

*ನಾಪತ್ತೆಯಾಗಿದ್ದ ಪಿಯು ಪ್ರೇಮಿಗಳು ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ನಾಪತ್ತೆಯಾಗಿದ್ದ ಪಿಯುಸಿ ಪ್ರೇಮಿಗಳಿಬ್ಬರೂ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಹರಪನಹಳ್ಳಿಯ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯ ಪ್ರದೇಶದಲ್ಲಿ ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

Home add -Advt

ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ (18) ಬಂಡ್ರಿ ಗ್ರಾಮದ ದೀಪಿಕಾ (18) ಮೃತರು. ಒಂದೇ ಮರದ ಕೊಂಬೆಗೆ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಬ್ಬರೂ ಕೂಡ ಹರಪನಹಳ್ಳಿ ಪಿಯು ಕಾಲೇಜಿನಲ್ಲಿ ಪಿಯು ಪರೀಕ್ಷೆ ಬರೆದಿದ್ದರು. ಇಬ್ಬರೂ ಪ್ರಥಮ ಶ್ರೇಣಿಯಲ್ಲಿ ಪಾಸ್ ಆಗಿದ್ದರು. ಪಿಯುಸಿ ಫಲಿತಾಂಶ ಬಂದ ದಿನದಿಂದ ನಾಪತ್ತೆಯಗೈದ್ದ ಇಬ್ಬರೂ ಇದೀಗ ಅರಣ್ಯ ಪ್ರದೇಶದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಯಾವ ಕಾರಣಕ್ಕೆ ಇಬ್ಬರೂ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎಂಬುದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಹರಪನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button