
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಕಾಲೇಜು ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ಆದಿಚುಂಚನಗಿರಿ ಕಾಲೇಜಿನಲ್ಲಿ ನಡೆದಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಘಶ್ರೀ (18) ಆತ್ಮಹತ್ಯೆ ಮಾಡಿಕೊಂಡವಳು. ಮೃತ ವಿದ್ಯಾರ್ಥಿನಿ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಚೆನ್ನಾಪುರ ನಿವಾಸಿ.
ಕಾಲೇಜು ಹಾಸ್ಟೇಲ್ ನಲ್ಲಿಯೇ ಇದ್ದು ವ್ಯಾಸಂಗ ಮಡುತ್ತಿದ್ದಳು. ಬಯಾಲಜಿ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದ ಮೇಘಶ್ರೀ, ವಾಶ್ ರೂಂ ಗೆ ಹೋಗುವುದಾಗಿ ಹೇಳಿ ಹೋದವಳು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ದೊಡ್ಡಪೇಟೆ ಪೊಲೀಸ್ ಠಾಣಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ