ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೆಸಮವಸ್ತ್ರ ಪಾಲನೆ ಕಡ್ಡಾಯವಾಗಿದ್ದು, ಕಾಲೇಜು ಅಭಿವೃದ್ಧಿ ಸಮಿತಿ ನಿಗದಿಪಡಿಸಿದ ವಸ್ತ್ರ ಸಂಹಿತೆ ಪಾಲನೆ ಮಾಡಬೇಕು ಎಂದು ಪಿಯು ಬೋರ್ಡಾದೇಶ ಹೊರಡಿಸಿದೆ.
2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಪಿಯು ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಆದೇಶ ನೀಡಲಾಗಿದೆ. ಈ ಬಗ್ಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಹೈಕೋರ್ಟ್ ನೀಡಿದ ಸೂಚನೆಯಂತೆ ವಸ್ತ್ರ ಸಂಹಿತೆ ಪಾಲನೆ ಮಾಡಬೇಕು ಎಂದು ತಿಳಿಸಲಾಗಿದೆ.
ಮಾರ್ಗಸೂಚಿಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ನಿಗದಿ ಮಾಡಿದ ಸಮವಸ್ತ್ರ ಧರಿಸುವುದು ಕಡ್ಡಾಯವಾಗಿದೆ. ಒಂದು ವೇಳೆಸಮವಸ್ತ್ರ ನಿಯಮ ಇಲ್ಲವಾದಲ್ಲಿ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಚಿಹ್ನೆಯ ಹೊರತಾದ ವಸ್ತ್ರ ಧರಿಸಬಹುದು.
ಒಟ್ಟಾರೆ ರಾಜ್ಯದಲ್ಲಿ ಹಿಜಾವ್ ವಿವಾದದ ಬೆನ್ನಲ್ಲೇ ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿರುವ ಸಮವಸ್ತ್ರ ಕಡ್ಡಾಯ ಆದೇಶ ಮಹತ್ವ ಪಡೆದುಕೊಂಡಿದೆ.
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ