Latest

ಪಿಯುಸಿ ಮೌಲ್ಯಮಾಪನ ಮಾಡಲ್ಲ ಎಂದ ಉಪನ್ಯಾಸಕರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಪಿಯುಸಿ ಉಪನ್ಯಾಸಕರು ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ನಿರ್ಧರಿಸಿದ್ದಾರೆ.

ಕೊರೊನಾ ಸೋಂಕು ಸಮುದಾಯಕ್ಕೆ ಹರಡುತ್ತಿರುವುದರಿಂದ ಮೌಲ್ಯಮಾಪನ ಕೇಂದ್ರಗಳನ್ನು ಆಯಾ ಜಿಲ್ಲೆಗಳಲ್ಲಿ ವಿಕೇಂದ್ರಿಕರಣಗೊಳಿಸುವಂತೆ ಉಪನ್ಯಾಸಕರ ಸಂಘ ಮನವಿ ಮಾಡಿತ್ತು. ಕೊರೊನಾ ಸಮುದಾಯಕ್ಕೆ ಹರಡುತ್ತಿದೆ ಎಂದು ಈ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಉಪನ್ಯಾಸಕರ ಬೇಡಿಕೆಗೆ ಈಡೇರಿಸದ ಕಾರಣ ಇಂದಿನಿಂದ ಪ್ರಾರಂಭವಾಗಬೇಕಿದ್ದ ವಿಜ್ಞಾನ ವಿಷಯದ ಮೌಲ್ಯಮಾಪನ ಮಾಡದೇ ಇರಲು ಉಪನ್ಯಾಸಕರ ಸಂಘ ನಿರ್ಧಾರ ಮಾಡಿದೆ.

Home add -Advt

ಬೆಂಗಳೂರಿಗೆ ಬಂದು ಮೌಲ್ಯಮಾಪನ ಮಾಡುವ ಉಪನ್ಯಾಸಕರಿಗೆ ಸರ್ಕಾರ ಸರಿಯಾದ ವ್ಯವಸ್ಥೆ ಮಾಡಿಲ್ಲ. ಹೀಗಾಗಿ ಕೊರೊನಾ ಸಮಯದಲ್ಲಿ ಸರ್ಕಾರದ ಈ ನಡೆಗೆ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನಕ್ಕೆ ಅವಕಾಶ ಕೊಡಿ. ಇಲ್ಲವೇ ಕೊರೊನಾ ಕಡಿಮೆ ಆಗುವವರೆಗೂ ಮೌಲ್ಯಮಾಪನ ಸ್ಥಗಿತ ಮಾಡಿ ಎಂದು ಸರ್ಕಾರಕ್ಕೆ ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗೇಗೌಡ ಆಗ್ರಹಿಸಿದ್ದಾರೆ.

Related Articles

Back to top button