
ಪ್ರಗತಿವಾಹಿನಿ ಸುದ್ದಿ: ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮಧ್ಯಾಹ್ನದ ಬಿಸಿಯೂಟವನ್ನು ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುತ್ತಿದೆ.
ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಓದುವ ವಿದ್ಯಾರ್ಥಿಗಳಿಗೆ ಇನ್ಮುಂದೆ ಮಧ್ಯಾಹ್ನದ ಬಿಸಿಯೂಟ ನೀಡಲು ಸರ್ಕಾರ ಮುಂದಾಗಿದೆ. ನವೆಂಬರ್ 14 ಮಕ್ಕಳ ದಿನಾಚರಣೆಯಂದು ಈ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.
ಪ್ರಸ್ತುತ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ. ಈ ಯೋಜನೆಯನ್ನು ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ವಿಸ್ತರಿಸಲು ಚಿಂತನೆ ನಡೆಸಲಾಗಿದೆ.


