ಪ್ರಗತಿವಾಹಿನಿ ಸುದ್ದಿ; ಪುದುಚೇರಿ: ಶಾಸಕರ ರಾಜೀನಾಮೆಯಿಂದ ಅಲ್ಪಮತಕ್ಕೆ ಕುಸಿದಿದ್ದ ಪುದುಚೇರಿ ಕಾಂಗ್ರೆಸ್ ಸರ್ಕಾರ ಪತನಗೊಂಡಿದೆ.
ಇಂದು ನಡೆದ ವಿಶೇಷ ಅಧಿವೇಶನದಲ್ಲಿ ಪುದುಚೇರಿ ಸಿಎಂ ನಾರಾಯಣ ಸ್ವಾಮಿ, ವಿಶ್ವಾಸಮತ ಯಾಚನೆಯಲ್ಲಿ ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಸ್ಪೀಕರ್ ಘೋಷಿಸುತ್ತಿದ್ದಂತೆಯೇ ವಿಧಾನಸಭೆಯಿಂದ ಸಿಎಂ ವಿ.ನಾರಾಯಣ ಸ್ವಾಮಿ ಮತ್ತು ಕಾಂಗ್ರೆಸ್ ಸದಸ್ಯರು ಹೊರನಡೆದರು.
ಕಾಂಗ್ರೆಸ್ ಶಾಸಕರಾದ ಲಕ್ಷ್ಮೀನಾರಾಯಣನ್ ಮತ್ತು ಡಿಎಂಕೆ ಶಾಸಕ ವೆಂಕಟೇಶನ್ ರಾಜೀನಾಮೆಯಿಂದಾಗಿ, 33 ಸದಸ್ಯರನ್ನೊಳಗೊಂಡ ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್–ಡಿಎಂಕೆ ಮೈತ್ರಿಕೂಟದ ಶಾಸಕರ ಸಂಖ್ಯೆ 11ಕ್ಕೆ ಕುಸಿದಿತ್ತು. ವಿರೋಧ ಪಕ್ಷ 14 ಶಾಸಕರನ್ನು ಹೊಂದಿತ್ತು. ಮಾಜಿ ಸಚಿವರಾದ ಎ.ನಮಶಿವಾಯಂ ಮತ್ತು ಮಲ್ಲಾಡಿ ಕೃಷ್ಣರಾವ್ ಸೇರಿದಂತೆ ನಾಲ್ವರು ಕಾಂಗ್ರೆಸ್ ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಫೆ.22ರೊಳಗೆ ವಿಶ್ವಾಸಮತ ಸಾಬೀತು ಪಡಿಸುವಂತೆ ಲೆಫ್ಟಿನೆಂಟ್ ಗವರ್ನರ್ ತಮಿಳ್ ಸಾಯಿ ಸಿಎಂ ನಾರಾಯಣ ಸ್ವಾಮಿಗೆ ಸೂಚಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ