Kannada NewsKarnataka NewsLatest
ಪಕ್ಷಾತೀತವಾಗಿ ಎಲ್ಲೆಡೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಪ್ರಶಂಸೆ – ಚನ್ನರಾಜ ಹಟ್ಟಿಹೊಳಿ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪೂಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯ ಘಟ್ಟದ ಮಾರ್ಗದ ರಸ್ತೆ ಅಭಿವೃದ್ಧಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ 97 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬುಧವಾರ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಕಳೆದ ನಾಲ್ಕೂವರೆ ವರ್ಷದಲ್ಲಿ ಕ್ಷೇತ್ರದ ಪ್ರತಿ ಹಳ್ಳಿಯಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯ ನಿರ್ಮಾಣವಾಗಿದ್ದು, ಗುಣಮಟ್ಟಕ್ಕೂ ಆದ್ಯತೆ ನೀಡಲಾಗಿದೆ. ಕ್ಷೇತ್ರದ ಅಭಿವೃದ್ಧಿ ನೋಡಿ ಜನರು ಪಕ್ಷಾತೀತವಾಗಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಪ್ರಶಂಸಿಸುತ್ತಿದ್ದಾರೆ. ನಿಜವಾಗಿ ಅಭಿವೃದ್ಧಿಯಾಗಬೇಕೆಂದರೆ ಇಂತಹ ಶಾಸಕರಿರಬೇಕು ಎಂದು ಹೇಳುತ್ತಿದ್ದಾರೆ. ನಾವು ನಿಸ್ವಾರ್ಥವಾಗಿ ಮತ್ತು ಅವಿಶ್ರಾಂತವಾಗಿ ಕ್ಷೇತ್ರಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲರ ಸಹಕಾರದಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸಿ ಸಿ ಪಾಟೀಲ, ಸುರೇಶ ಇಟಗಿ, ರುದ್ರಗೌಡ ಪಾಟೀಲ, ಮಲ್ಲಪ್ಪ ಹುಲಿಕವಿ, ಅನಿಲ ಪಾಟೀಲ, ಬಿ ಜಿ ವಾಲಿಇಟಗಿ, ನಿಂಗಪ್ಪ ತಳವಾರ, ಮಹಾಂತೇಶ ಹಂಚಿನಮನಿ, ಮೀರಾ ನದಾಫ್, ಮಲ್ಲನಗೌಡ ಪಾಟೀಲ, ಸಮೀರ ದೇವಲಾಪುರ, ಶಿಪು ಹಳಮನಿ, ಬಿ ಆರ್ ಪಾಟೀಲ, ಅಲ್ತಾಫ್ ಜಾಲಿಕೊಪ್ಪ, ರಾಜಶೇಖರ್ ಬಾಸಿಂಗದಾರ ಮುಂತಾದವರು ಉಪಸ್ಥಿತರಿದ್ದರು.
https://pragati.taskdun.com/belgaum-news/kannada-is-the-language-of-our-heart-never-fades-channaraja-hattiholi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ