Belagavi NewsBelgaum NewsKannada NewsKarnataka NewsLatestPolitics

*ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ರಾಜ್ಯದೆಲ್ಲೆಡೆ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಲಸಿಕೆಯ ಅಭಿಯಾನಕ್ಕೆ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಚಾಲನೆ ನೀಡಿದರು.

ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ, ಮರೆಯದೇ ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆತನ್ನಿ. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಸಚಿವರು ಕರೆ ನೀಡಿದರು.

ಈ ವೇಳೆ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಮೇಶ ದಂಡಗಿ, ಪಲ್ಸ್ ಪೋಲಿಯೊ ನೊಡೆಲ್ ಅಧಿಕಾರಿ ಡಾ. ಸಂಜಯ ಡುಮ್ಮಗೋಳ, ಜಿಲ್ಲಾ ಆಯುಷ್ಯ ಅಧಿಕಾರಿ ಶ್ರೀಕಾಂತ ಸುಣಧೋಳಿ, ಡಾ.ಪವನ್ ಗಲಗಲಿ, ಅಂಗನವಾಡಿಯ ಮೇಲ್ವಿಚಾರಕರು, ಆಶಾ ಕಾರ್ಯಕರ್ತೆಯರು ಮುಂತಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button