Kannada NewsLatestNational

*ದೇಹಲಿ ಸ್ಫೋಟಕ್ಕೆ ಪುಲ್ವಾಮಾ ನಂಟು..?: ಚುರುಕುಗೊಂಡ ತನಿಖೆ*

ಪ್ರಗತಿವಾಹಿನಿ ಸುದ್ದಿ: ದೇಶವನ್ನೆ ಬೆಚ್ಚಿಬಿಳಿಸಿರುವ ರಾಷ್ಟ್ರ ರಾಜಧಾನಿ ದೇಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದಲ್ಲಿ ಪುಲ್ವಾಮಾ ನಂಟಿರುವ ಶಂಕೆ ವ್ಯಕ್ತವಾಗಿದೆ.

ಸ್ಫೋಟಗೊಂಡ HR 26 CE 7674 ನೋಂದಣಿಯ i20 ಕಾರು ಮೊಹಮ್ಮದ್ ಸಲ್ಮಾನ್ ಎಂಬುವವರ ಹೆಸರಿನಲ್ಲಿ ಹರಿಯಾಣದಲ್ಲಿ ನೋಂದಣಿಯಾಗಿತ್ತು ಎಂದು ತಿಳಿದು ಬಂದಿದೆ. ಗುರುಗ್ರಾಮದ ಶಾಂತಿನಗರ ನಿವಾಸಿ ಸಲ್ಮಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರು ಕಾರನ್ನು ಸುಮಾರು ಒಂದೂವರೆ ವರ್ಷದ ಹಿಂದೆ ದೆಹಲಿಯ ಓಕ್ಲಾ ನಿವಾಸಿ ದೇವೇಂದರ್ ಅವರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ. 

ತನಿಖೆಯನ್ನು ಮುಂದುವರಿಸಿದ ಪೊಲೀಸರಿಗೆ, ದೇವೇಂದರ್ ಕೂಡ ಕಾರನ್ನು ಜಮ್ಮು-ಕಾಶ್ಮೀರದ ಪುಲ್ವಾಮಾ ಮೂಲದ ತಾರೀಕ್ ಎಂಬ ವ್ಯಕ್ತಿಗೆ ಮಾರಾಟ ಮಾಡಿರುವುದು ಗೊತ್ತಾಗಿದೆ. ಈ ಬೆಳವಣಿಗೆಯು ಪ್ರಕರಣಕ್ಕೆ ಪುಲ್ವಾಮಾ ನಂಟನ್ನು ಸೂಚಿಸಿದ್ದು, ತನಿಖಾ ಸಂಸ್ಥೆಗಳಲ್ಲಿ ಆತಂಕ ಮೂಡಿಸಿದೆ

ಉಗ್ರರ ಕೈವಾಡದ ಬಗ್ಗೆಯೂ ಶಂಕೆ ವ್ಯಕ್ತವಾಗಿದ್ದು, ದೆಹಲಿ ಪೊಲೀಸರ ತಂಡವೊಂದು ತಾರೀಕ್‌ನ ಜಾಡು ಹಿಡಿದು ಪುಲ್ವಾಮಾಗೆ ತೆರಳಿದೆ. ಸದ್ಯಕ್ಕೆ ಸಲ್ಮಾನ್ ಮತ್ತು ದೇವೇಂದರ್ ಅವರನ್ನು ವಶಕ್ಕೆ ಪಡೆದು, ಸ್ಫೋಟದ ಕಾರಣ, ಉದ್ದೇಶ ಮತ್ತು ಪಿತೂರಿಯ ಬಗ್ಗೆ ಸಮಗ್ರ ವಿಚಾರಣೆ ನಡೆಸಲಾಗುತ್ತಿದೆ. 

Home add -Advt

ಎಫ್‌ಎಸ್‌ಎಲ್, ಎನ್‌ಎಸ್‌ಜಿ ಮತ್ತು ಎನ್‌ಐಎ ಅಧಿಕಾರಿಗಳು ಸಹ ತನಿಖೆಯಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ ಎಲ್ಲಾ ಆಯಾಮಗಳಿಂದ ಪ್ರಕರಣದ ತನಿಖೆ ಭರದಿಂದ ಸಾಗಿದೆ. ಘಟನೆ ನಡೆದ ಕೆಲವೆ ಗಂಟೆಗಳ ಬಳಿಕ ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು, ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಇಂದು ಎಲ್ಲಾ ಭದ್ರತಾಪಡೆಗಳ ಮುಖ್ಯಸ್ಥರ ಜೊತೆ ಸಭೆ ನಡೆಯಲಿದೆ. 

Related Articles

Back to top button