*ಹತ್ತರಗಿ ಟೋಲ್ ಬಂದ್ ಮಾಡಿ ರೈತರ ಆಕ್ರೋಶ*: *ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್‌ಗೇಟ್ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್‌ಗಳನ್ನು ಅಡ್ಡಲಾಗಿ ನಿಲ್ಲಿಸಿ ಸಂಚಾರ ತಡೆದ ರೈತರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ರಸ್ತೆಯ ಮೇಲೆಯೇ ಮಲಗಿ ತಮ್ಮ ಅಸಮಾಧಾನ ಹೊರಹಾಕಿದರು. ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿರುವುದರಿಂದ ಸಂಚಾರಕ್ಕೆ … Continue reading *ಹತ್ತರಗಿ ಟೋಲ್ ಬಂದ್ ಮಾಡಿ ರೈತರ ಆಕ್ರೋಶ*: *ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್*