National

*ಪುಣೆ ಬಸ್ ನಲ್ಲಿ ನಡೆದ ಅತ್ಯಾಚಾರ ಕೇಸ್: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕಳ್ಳತನ, ದರೋಡೆ ಮತ್ತು ಸರಗಳ್ಳತನ ಹೀಗೆ ಅರ್ಧ ಡಜನ್‌ಗೂ ಹೆಚ್ಚು ಕೇಸ್‌ಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ 26 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದು ಆರೋಪಿಯನ್ನು ಪೊಲೀಸರು ಬಂದಿಸಿದ್ದಾರೆ.‌

ಪುಣೆಯ ಸ್ವರ್ಗೇಟ್‌ ಡಿಪೋದಲ್ಲಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಮಹಾರಾಷ್ಟ್ರದ ಶಿರೂರಿನಲ್ಲಿ ಮಧ್ಯರಾತ್ರಿ ಕಾರ್ಯಾಚರಣೆಯ ವೇಳೆ ಬಂಧಿಸಲಾಗಿದೆ. ಆರೋಪಿ ದತ್ತಾತ್ರೇಯ ರಾಮದಾಸ್ ಗಾಡೆ (37) ಶಿರೂರಿನ ಜಮೀನಿನಲ್ಲಿ ತಲೆಮರೆಸಿಕೊಂಡಿದ್ದ. ನಿನ್ನೆಯಿಂದ ಪುಣೆ ಪೊಲೀಸರ 13 ತಂಡಗಳು ಆತನಿಗಾಗಿ ಹುಡುಕಾಟ ನಡೆಸಿದ್ದವು. ತಡರಾತ್ರಿ, ಆರೋಪಿ ಊಟಕ್ಕಾಗಿ ಓರ್ವನ ಮನೆಗೆ ಭೇಟಿ ನೀಡಿದಾಗ ಆತನ ಬಂಧನವಾಗಿದೆ.

ಮಂಗಳವಾರ ಮುಂಜಾನೆ 5.45 ರ ಸುಮಾರಿಗೆ ಪ್ಲಾಟ್‌ಫಾರ್ಮ್ ಒಂದರಲ್ಲಿ ಸತಾರಾ ಜಿಲ್ಲೆಗೆ ಬಸ್‌ಗಾಗಿ ಕಾಯುತ್ತಿದ್ದಾಗ ಗಾಡೆ ಮಹಿಳೆಯ ಮೇಲೆ ಅತ್ಯಾಚಾರವೆಸಗದ್ದ. ಪಾಪಿ ದತ್ತಾತ್ರೇಯ ಸತಾರಾ ಬಸ್ ಮತ್ತೊಂದು ಪ್ಲಾಟ್‌ಫಾರ್ಮ್‌ಗೆ ಬಂದಿದೆ ಎಂದು ಹೇಳಿ ಆಕೆಯನ್ನು ದಾರಿ ತಪ್ಪಿಸಿ ಮತ್ತೊಂದು ಬಸ್ ನೊಳಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ. 

ಪುಣೆಯ ಗುಣತ್ ಗ್ರಾಮದ ನಿವಾಸಿ ಗಾಡೆ, ಪುಣೆ ಮತ್ತು ಅಹಲ್ಯಾನಗರ ಜಿಲ್ಲೆಗಳಲ್ಲಿ  ಹಲವಾರು ಪ್ರಕರಣ ಎಸಗಿ 2019 ರಿಂದ ಪ್ರಕರಣವೊಂದರಲ್ಲಿ ಜಾಮೀನಿನ ಮೇಲೆ ಹೊರಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button